ನವದೆಹಲಿ : ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಹಾಗೂ ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿವೆ.
BREAKING : ಬೆಳಗಾವಿಯಲ್ಲಿ ‘ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಖಾಸಗಿ ಬಸ್ : 28 ಪ್ರಯಾಣಿಕರು ಪಾರು
ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.
BREAKING : ‘ಡಿ ಬಾಸ್’ ಗೆ ಮತ್ತೊಂದು ಸಂಕಷ್ಟ : ರಾಜ್ಯ ‘ಮಹಿಳಾ ಆಯೋಗ’ ದಿಂದ ನಟ ದರ್ಶನ್ ಗೆ ನೋಟಿಸ್
ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್, ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಸಂರಕ್ಷಣಾ ಕಾರ್ಯಾಚರಣೆಯು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಧ್ಯೇಯದಲ್ಲಿ ಮುಂದೆ ಸಾಗಲಿದೆ. ವರದಿಯಲ್ಲಿ ತಿಳಿಸಿರುವಂತೆ ಸಂರಕ್ಷಿತ ಪ್ರದೇಶಗಳಾಚೆಗೂ ಸಹ ಚಿರತೆಗಳನ್ನು ನಾವು ರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ
ಇದು ಖುಷಿಯ ಸುದ್ದಿ! ಚಿರತೆ ಸಂಖ್ಯೆ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ. ಸುಸ್ಥಿರ ಸಹಬಾಳ್ವೆಗೆ ದಾರಿ ಮಾಡಿಕೊಡುವ, ವನ್ಯ ಜೀವಿ ಸಂರಕ್ಷಣೆಯ ವಿವಿಧ ಸಾಮೂಹಿಕ ಪ್ರಯತ್ನಗಳ ಭಾಗವಾಗಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ.