ಬೆಂಗಳೂರು : ಬೆಂಗಳೂರಿನಲ್ಲಿ ಚಿರತೆ ಮತ್ತೆ ಭೇಟಿ ಹುಟ್ಟಿಸಿದ್ದು ಬೆಂಗಳೂರಿನ ಅಂಜನಾಪುರದಲ್ಲಿ ಮೂರನೇ ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಅಂಜನಾಪುರದ ಫೈವ್ ಜಿ ಬ್ಲಾಕ್ ನಲ್ಲಿ ಚಿರತೆ ಕಾಣಿಸಿಕೊಂಡಿದೆ.ಈ ಹಿಂದೆ ಫೆಬ್ರವರಿ 3 ಮತ್ತು 6ನೇ ತಾರೀಕಿನಂದು ಚಿರತೆ ಕಾಣಿಸಿಕೊಂಡಿತ್ತು.
ಸಂದೀಪ್ ಎಂಬುವವರ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಡರಾತ್ರಿ ಚಿರತೆ ಕಂಡು ನಿವಾಸಿಗಳು ಭಯಭೀತರಾಗಿದ್ದಾರೆ. ಮನೆಯಿಂದ ಹೊರಗಡೆ ಬರುವುದಕ್ಕೂ ನಿವಾಸಿಗಳು ಇದೀಗ ಭಯಪಡುತ್ತಿದ್ದಾರೆ. ಈ ಹಿಂದೆಯೂ ಕೂಡ ಇದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇದೀಗ ಮೂರನೇ ಬಾರಿ ಚಿರತೆ ಕಾಣಿಸಿಕೊಂಡಿದ್ದು ಅದರ ಒಡಾಟ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಡಿಯೋ ನಿವಾಸಿಗಳು ಆದಷ್ಟು ಬೇಗ ಚಿರತೆಯನ್ನು ಹೆಸರೆಹಿಡಿರಿ ಎಂದು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.








