Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್
KARNATAKA

ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ

ಮಂಡ್ಯ : ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು.

ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಖ್ಯಾತ ಗಾಯಕರಿಂದ ರಸ ಮಂಜರಿ ಕಾರ್ಯಕ್ರಮದಲ್ಲಿ ತಮ್ಮ ಹುಟ್ಟು ಆಚರಿಸಿಕೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಜಗತ್ತನ್ನೆ ಕಾಡುತ್ತಿದ್ದ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನಾನು ಸಮಾಜ ಸೇವೆ ಮಾಡಲು ಬಂದವನು. ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಆದರೆ, ನಾನು ಮಾಡುತ್ತಿದ್ದ ಸಮಾಜ ಸೇವೆಯನ್ನು ಮೆಚ್ಚಿ ಮೊದಲ ಚುನಾವಣೆಯಲ್ಲೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಿರಿ ಹೀಗಾಗಿ ನಿಮಗೆ ಕೃತಜ್ಞನಾಗಿದ್ದಿನಿ ಎಂದರು.

ಕ್ಷೇತ್ರದ ಜನರು ನನಗೆ ತೋರುತ್ತಿರುವ ಪ್ರೀತಿ ವಿಶ್ವಾಸಕ್ಕೆ ನಾನು ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದಕ್ಕೆ ನಾನು ಮತ್ತು ನನ್ನ ಇಡೀ ಕುಟುಂಬ ಋಣಿಯಾಗಿದ್ದು, ಸದಾ ಕಾಲ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದು ಹಾಗೂ ಜನರ ಕಷ್ಟ ಸುಖಗಳಲ್ಲಿ ನಿರಂತರವಾಗಿ ನಿಲ್ಲುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾನು ಶಾಸಕನಾಗಿ ಸರ್ಕಾರದಿಂದ ಜನರಿಗೆ ಅನುಕೂಲ ಕಲ್ಪಿಸುವ ಜತೆಗೆ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿಂದಲೂ ನಿರಂತರವಾಗಿ ಬಡವರ, ಆರ್ಥಿಕವಾಗಿ ಹಿಂದುಳಿದವರ, ದೀನದಲಿತರ, ಅಲ್ಪಸಂಖ್ಯಾತರ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದವರ ಪರವಾಗಿ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸುತ್ತಿದ್ದೇನೆ. ಅಧಿಕಾರ ಇರಲಿ, ಇಲ್ಲದಿರಲಿ ಸದಾ ಕಾಲ ನನ್ನ ಜನಸೇವೆ ಮುಂದುವರೆಯುತ್ತದೆ ಎಂದು ವಾಗ್ದಾನ ನೀಡಿದರು.

ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಹೆಚ್ಚು ಮಾತನಾಡದೆ ಮೌನ ಸಾಧಕರಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ತಾಲೂಕನ್ನು ರಾಜ್ಯಕ್ಕೆ ಮಾದರಿ ತಾಲೂಕನ್ನಾಗಿ ಮಾಡಲು ಮುಂದಾಗಿರುವುದು ಮೆಚ್ಚುಗೆಯ ವಿಷಯ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಸದಾ ಕಾಲ ಕ್ಷೇತ್ರದ ಜನರಿಗೆ ಸುಲಭವಾಗಿ ಸಿಗುವ ಮೂಲಕ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಹಾಗೂ ಸರ್ಕಾರದಿಂದ ಅತಿ ಹೆಚ್ಚು ಅನುದಾನ ತಂದು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಖ್ಯಾತ ಗಾಯಕರಾದ ಹೇಮಂತ್, ಇಂದು ನಾಗರಾಜ್ ಸೇರಿದಂತೆ ಹಲವಾರು ಪ್ರಸಿದ್ಧ ಗಾಯಕರು ನಡೆಸಿಕೊಟ್ಟ ರಸಮಂಜರಿ ಕಾರ್ಯಕ್ರಮ ನೆರದಿದ್ದ ಜನರನ್ನು ರಂಜಿಸಿತು.

ವಿವಿಧ ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕೆ.ಎಂ.ಉದಯ್ ಅವರಿಗೆ ಭಾರಿ ಗಾತ್ರದ ಹೂವಿನ ಹಾರ ಹಾಕುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದರು.

ಸಮಾಜ ಸೇವಕಿ ವಿನುತಾ ಕೆ.ಎಂ.ಉದಯ್, ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಲುವರಾಜು, ರಾಜೀವ್, ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಮನ್ಮುಲ್ ನಿರ್ದೇಶಕ ಹರೀಶ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ನಿರ್ದೇಶಕ ಪಿ.ಸಂದರ್ಶ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಗೊರವನಹಳ್ಳಿ ರಾಘವ, ಮಾಜಿ ಗ್ರಾಪಂ ಅಧ್ಯಕ್ಷ ಮಧು ಕುಮಾರ್, ಮುಖಂಡರಾದ ಬಸವರಾಜು, ಅಜ್ಜಹಳ್ಳಿ ರಾಮಕೃಷ್ಣ, ಕಂಠಿ ಸುರೇಶ್, ಸಿಪಾಯಿ ಶ್ರೀನಿವಾಸ್, ಮಮತಾ ಶಂಕರೇಗೌಡ, ಮಹದೇವಯ್ಯ, ಪೈರೋಜ್ ಹಾಗೂ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.