ಬೆಂಗಳೂರು: ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಮಾ ಬಾಂಡ್ ಹೆಸರಿನಲ್ಲಿ ಹಣ ಸಂಗ್ರಹಿಸಿದ್ದಾರೆ. ಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ಕಷ್ಟ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
BREAKING NEWS: ಸಿಲಿಕಾನ್ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ: ಜನರು ಹೈರಾಣು
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ 2 ಲಕ್ಷ, 1 ಲಕ್ಷ ರೂ. ಡಿಡಿ ಪಡೆದರೆ ಬಿಜೆಪಿಯವರಿಗೇನು ನೋವು ಎಂದರು.
BREAKING NEWS: ಸಿಲಿಕಾನ್ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ: ಜನರು ಹೈರಾಣು
ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, ಈ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಇಂತಹ ಘಟನೆ ಆಗಬಾರದಿತ್ತು, ಆಗಿಹೋಗಿದೆ. ಈ ರೀತಿ ಹೇಗೆ ಆಯಿತು ಎಂದು ಎಲ್ಲರಿಗೂ ಅನುಮಾನ ಬರುತ್ತದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡಿ ನ್ಯಾಯ ಒದಗಿಸಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಧೈರ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.