Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ’ : ಪೇಜಾವರ ಶ್ರೀಗಳಿಗೆ ಸಚಿವ ಮಹಾದೇವಪ್ಪ ಬಹಿರಂಗ ಪತ್ರ!
KARNATAKA

`ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ’ : ಪೇಜಾವರ ಶ್ರೀಗಳಿಗೆ ಸಚಿವ ಮಹಾದೇವಪ್ಪ ಬಹಿರಂಗ ಪತ್ರ!

By kannadanewsnow5725/11/2024 8:24 AM

ಬೆಂಗಳೂರು : ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು “ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ” 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ ಎಂದು ಹೇಳಿಕೆ ನೀಡಿದ್ದರು.

ಈ ಕುರಿತು ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ ಪೇಜಾವರ ಶ್ರೀಗಳಿಗೆ ಬಹಿರಂಗ ಪತ್ರ ಬರೆದಿದ್ದು, ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು “ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ” 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದು, ಸನಾತನ ಮಂಡಳಿ ರಚಿಸಲು ಕರೆ ನೀಡಿದ್ದಾರೆ.

ಶ್ರೀಗಳೇ,

ಜಾತಿ ಮತ್ತು ಧರ್ಮದ ಶ್ರೇಷ್ಠತೆಯ ಕಾರಣಕ್ಕೆ ಅಸಮಾನತೆ, ಅವಮಾನ ಮತ್ತು ದೌರ್ಜನ್ಯದ ಕೂಪವಾಗಿದ್ದ ಸನಾತನ ಧರ್ಮದ ಕೆಟ್ಟ ನಡವಳಿಕೆಗಳನ್ನು ದೂರ ಮಾಡಿ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಎತ್ತಿ ಹಿಡಿಯುವ ಮಹೋನ್ನತ ಉದ್ದೇಶದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ಈ ದೇಶಕ್ಕೆ ನೀಡಿದ್ದಾರೆ.

ಭಾರತದ ಪ್ರಜೆಗಳಾದ ನಾವು ಏನು ಮಾಡಬೇಕು ಎಂಬ ಕರ್ತವ್ಯ ಪ್ರಜ್ಞೆಯ ಜೊತೆಗೆ ನಮ್ಮ ಹಕ್ಕುಗಳು ಯಾವುವು ಎಂಬುದನ್ನೂ ಸಹ ಅದರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಹೀಗಾಗಿ ಇಲ್ಲಿ ನೀವು ಹೇಳುವ ಧರ್ಮ ಮತ್ತಿತರೆ ಆಚರಣೆಗಳು ಸಂವಿಧಾನದ ಪರಿಮಿತಿಯಲ್ಲೇ ಬರುವ ಕಾರಣ ಇಲ್ಲಿ ಯಾರೂ ಕೂಡಾ Extra constitutional authority ಅಲ್ಲ ಎಂಬುದನ್ನು ಮೊದಲು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಲು ನಾನು ಬಯಸುತ್ತೇನೆ.

ಧರ್ಮಕ್ಕೂ ರಾಜಕೀಯಕ್ಕೂ ಸಂಬಂಧ ಬೆರೆಸಿ ಧರ್ಮವನ್ನು ರಾಜಕೀಯ ಪಕ್ಷಗಳಿಗೆ ಸೀಮಿತಗೊಳಿಸುವ ಕೆಲಸ ಮಾಡುವ ಬದಲು, ವಿಶ್ವಗುರು ಬಸವಣ್ಣ, ವಿಶ್ವ ಚೇತನ ಸ್ವಾಮಿ ವಿವೇಕಾನಂದರು ಧರ್ಮದ ಬಗ್ಗೆ ಆಡಿರುವ ಮಾತುಗಳನ್ನು ಬದುಕಲ್ಲಿ ಅಳವಡಿಸಿಕೊಂಡು ಅದನ್ನು ಸಮಾಜಕ್ಕೆ ತಿಳಿಸುವುದು ನಿಜದ ಧರ್ಮ ಸೇವೆ ಎಂದು ನಾನು ಹೇಳಲು ಬಯಸುವೆ.

ಸನಾತನ ಧರ್ಮ ಎಷ್ಟರ ಮಟ್ಟಿಗೆ ಪರಿಶಿಷ್ಟರ ಬದುಕನ್ನು ಹೀಯಾಳಿಸಿ ಅವಮಾನಿಸಿದೆ ಎನ್ನುವುದಕ್ಕೆ ಪರಿಶಿಷ್ಟರ ಅನುಭವಕ್ಕಿಂತ ದೊಡ್ಡ ಉದಾಹರಣೆ ಇನ್ನೊಂದಿಲ್ಲ.

ಹೀಗಾಗಿ ಸಮಾನತೆಯ ಸಂಜೀವಿನಿಯಾದ ಬಾಬಾ ಸಾಹೇಬರ ಸಂವಿಧಾನದ ಕುರಿತಂತೆ ಅಸಹನೆ ತೋರುವುದನ್ನು ಬಿಟ್ಟು ಸಂವಿಧಾನ ಹೇಳಿದ ಆಶಯಕ್ಕನುಸಾರವಾಗಿ ನಡೆಯಿರಿ ಎಂದು ವಿನಂತಿಸುವೆ.

ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು "ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ" 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದು, ಸನಾತನ ಮಂಡಳಿ ರಚಿಸಲು ಕರೆ ನೀಡಿದ್ದಾರೆ.

ಶ್ರೀಗಳೇ,

ಜಾತಿ ಮತ್ತು ಧರ್ಮದ ಶ್ರೇಷ್ಠತೆಯ ಕಾರಣಕ್ಕೆ… pic.twitter.com/ASxgyckcAw

— Dr H C Mahadevappa(Buddha Basava Ambedkar Parivar) (@CMahadevappa) November 24, 2024

'Let there be a Constitution that honours us': Mahadevappa's open letter to Pejawar seers `ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ' : ಪೇಜಾವರ ಶ್ರೀಗಳಿಗೆ ಸಚಿವ ಮಹಾದೇವಪ್ಪ ಬಹಿರಂಗ ಪತ್ರ!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM4 Mins Read

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM2 Mins Read

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM1 Min Read
Recent News

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

09/02/2026 9:57 PM

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

BREAKING : ‘ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ’ಗೆ ಹಿಂಬಡ್ತಿ ; ‘BCCI ಕೇಂದ್ರ ಒಪ್ಪಂದ’ ಪ್ರಕಟ!

09/02/2026 9:39 PM
State News
KARNATAKA

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭ

By kannadanewsnow0909/02/2026 9:57 PM KARNATAKA 4 Mins Read

ಬೆಂಗಳೂರು : “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ…

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

09/02/2026 9:47 PM

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

09/02/2026 9:42 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.