ದಾವಣಗೆರೆ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಆರೋಪಿಸಿ ತನಿಖೆ ನಡೆಸಲು ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಆದೇಶಿಸಿದು ಒಳ್ಳೆಯ ವಿಚಾರ. ಹೊಸ ವಿಚಾರಣೆ ನಡೆಯಬೇಕು, ಸತ್ಯಾಂಶ ಹೊರ ಬರಬೇಕು. ಎಲ್ಲರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಇಂತಹ ಸಂದರ್ಭ ಬರುವುದಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ. ಲೋಕಾಯುಕ್ತ ಜವಾಬ್ದಾರಿಯಿಂದ ಕೆಲಸ ಮಾಡಲಿ ಎಂದರು.
ಇನ್ನು ಎಸಿಬಿ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ನೇಮಕ ವಿಚಾರ; ಎಸಿಬಿ ಅಧಿಕಾರಿಗಳನ್ನೇ ಲೋಕಾಯುಕ್ತಕ್ಕೆ ನೇಮಕ ಮಾಡ್ತಿರುವುದು ಸೂಕ್ತವಾದ ಕ್ರಮವಲ್ಲ. ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆದು ಲೋಕಾಯುಕ್ತರು ನೇಮಕ ಮಾಡಬೇಕು. ರಾಜಕಾರಣಿಗಳಿಗೆ ಇಷ್ಟವಾದ ಅಧಿಕಾರಿಗಳನ್ನು ಕಳುಹಿಸಬಾರದು ಎಂದರು.