Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ: ಸಚಿವ ಮಧು ಬಂಗಾರಪ್ಪ
KARNATAKA

ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ: ಸಚಿವ ಮಧು ಬಂಗಾರಪ್ಪ

By kannadanewsnow0914/04/2025 2:44 PM

ಶಿವಮೊಗ್ಗ : ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳಂತೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ತೋರಿಸಿರುವ ಹಾದಿಯಲ್ಲಿ ಒಟ್ಟಾಗಿ ನಡೆಯೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆಯಿAದ ಮಾತ್ರ ಶಕ್ತಿ ಎಂದು ಅಂಬೇಡ್ಕರ್‌ರವರು ತೋರಿಸಿದ್ದಾರೆ. ಸಂಘಟನೆ ರೂಪ ಬೇರೆ ಬೇರೆಯಾಗಿದ್ದರೂ ಉದ್ದೇಶ ಒಂದೇ ಇರುತ್ತದೆ. ಅಂದು ಬ್ರಿಟಿಷರಿಗೆ ಹೆಚ್ಚಿನ ಶಕ್ತಿ ಇರಲಿಲ್ಲ. ಬದಲಾಗಿ ಅವರು ನಮ್ಮನ್ನು ಒಡೆದು ಆಳುವ ನೀತಿಯನ್ನು ಅನುಸರಿಸಿದ್ದರಿಂದ ಹಾಗೆ ಕಂಡರು. ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಅಂಬೇಡ್ಕರ್‌ರAತಹ ಮಹನೀಯರು ಮಾಡಿದರು. ವೈವಿಧ್ಯತೆಯಿಂದ ಕೂಡಿರುವ ನಮ್ಮ ದೇಶಕ್ಕೆ ಅದ್ಭುತವಾದ ಸಂವಿಧಾನ ನೀಡುವಲ್ಲಿ ಬಹು ದೊಡ್ಡ ಕೊಡುಗೆ ಇತ್ತ ಇವರು ನಮ್ಮ ಸಂವಿಧಾನ ಶಿಲ್ಪಿ ಎನಿಸಿಕೊಂಡಿದ್ದಾರೆ.

ಅಂಬೇಡ್ಕರ್‌ರವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ ಸಮಾನತೆಗಾಗಿ ಹೋರಾಡಿದರು. ಜಾತಿ ವ್ಯವಸ್ಥೆ, ಅಸೃಶ್ಯತೆ ವಿರುದ್ದ ಹೋರಾಡಿ, ಅನೇಕ ಸುಧಾರಣೆಗಳನ್ನು ತಂದರು.

ನಮ್ಮ ಸಂವಿಧಾನದ ಪೀಠಿಕೆ ಬಗ್ಗೆ ಮುಖ್ಯವಾಗಿ ವಿದ್ಯಾರ್ಥಿಗಳು ತಿಳಿಯಬೇಕೆಂಬ ಉದ್ದೇಶದಿಂದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯವಾಗಿ ಓದುವ ಆದೇಶವನ್ನು ರಾಜ್ಯ ಸರ್ಕಾರ ಮಾಡಿದ್ದು, 1.8 ಕೋಟಿ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದರು.

ಮುಖ್ಯವಾಗಿ ಮಾನವೀಯತೆ ಮೆರೆಯಬೆಕು. ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಬಾಬಾಸಾಹೇಬ್ ಹೇಳುತ್ತಿದ್ದು, ನಮ್ಮ ತಂದೆ ತಾಯಿಯಂತೆ ಅಂಬೇಡ್ಕರ್‌ರವರು ನಮ್ಮ ಜೀವನದ ಬಹಳ ಮುಖ್ಯ ವ್ಯಕ್ತಿಯಾಗಿದ್ದಾರೆ.

ಪಿಯುಸಿಯಲ್ಲಿ ನಪಾಸಾದ ವಿದ್ಯಾರ್ಥಿಗಳಿಗೆ 2 ಮತ್ತು 3 ನೇ ಪರೀಕ್ಷೆ ಬರೆಯುವ ಅವಕಾಶವಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಉಚಿತ ಗ್ಯಾರಂಟಿ ಯೋಜನೆಗಳು ಬಡವರು, ಹಿಂದುಳಿದವರಿಗೆ ಅತ್ಯಂತ ಸಹಕಾರಿಯಾಗಿವೆ ಎಂದರು.

ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಭೂ ಮಂಡಲ ಇರುವವರೆಗೆ ಸಂವಿಧಾನವನ್ನು ಯಾರೂ ಬದಲಾಯಿಸದಂತಹ ಸಂವಿಧಾನ ನೀಡಿದ ಧೀಮಂತ, ದಾರ್ಶನಿಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್. ಶೋಷಿತ ವರ್ಗದ ಧ್ವನಿಯಾಗಿ, ಅವರ ಉಸಿರಾಗಿ ಜೀವನವನ್ನು ಕಟ್ಟಿಕೊಟ್ಟಿದ್ದಾರೆ. ಓರ್ವ ಆರ್ಥಿಕ ತಜ್ಞರೂ ಆಗಿದ್ದ ಅಂಬೇಡ್ಕರ್ ರಿಸರ್ವ್ ಬ್ಯಾಂಕ್ ಇಂಡಿಯಾ ಸ್ಥಾಪನೆಗೆ ಒತ್ತು ನೀಡಿದ್ದರು.

ಉದಾರವಾದಿ ಕೈಗಾರಿಕಾ ನೀತಿ, ನದಿ ಜೋಡಣೆ, ರಾಷ್ಟ್ರೀಯ ಜಲ ನೀತಿ ನೀಡುವ ಪ್ರಯತ್ನ ಮಾಡಿದ್ದರು. ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡದವರು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದರು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಇವರು 9 ಭಾಷೆ ಬಲ್ಲವರಾಗಿದ್ದು, ಉತ್ತಮ ವರ್ಣಚಿತ್ರಕಾರರಾಗಿದ್ದು ಇವರ ಸ್ವಂತ ಗ್ರಂಥಾಲಯದಲ್ಲಿ 50 ಸಾವಿರಕ್ಕೂ ಹೆಚ್ಚಿನ ಪುಸ್ತಕಗಳಿದ್ದವು

ರಾಜ್ಯ ಸರ್ಕಾರ ಶಾಲಾ-ಕಾಲೇಜು ಮಕ್ಕಳಿಗೆ ಸಂವಿಧಾನ ಪೀಠಿಕೆ ಓದಿಸುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ. ಡಾ.ಅಂಬೇಡ್ಕರ್ ಜನ್ಮ ಸ್ಥಳದಲ್ಲಿ ಸುಮಾರು ರೂ. 300 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಧೀಕ್ಷಾಭೂಮಿ ಅಭಿವೃದ್ಧಿಪಡಿಸಲಾಗಿದೆ. ಪ.ಜಾ ಪ. ಪಂ ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ , ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ, ಉಚಿತ ಉಜ್ವಲ ಯೋಜನೆ ಹೀಗೆ ಹಲವಾರು ಯೋಜನೆಗಳನ್ನು ಹಿಂದುಳಿದವರ ಏಳಿಗೆಗಾಗಿ ನೀಡಲಾಗುತ್ತಿದೆ ಎಂದ ಅವರು ಪಕ್ಷಾತೀತ, ಜಾತ್ಯಾತೀತವಾಗಿ ಅಂಬೇಡ್ಕರ್ ಅವರ ಆಶಯದಂತೆ ಬದುಕೋಣ ಎಂದರು.

ಶಾಸಕರಾದ ಎಸ್.ಎನ್ ಚನ್ನಬಸಪ್ಪ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದು ಶಕ್ತಿ. ಅವರ ಚಿಂತನೆಗಳನ್ನು ಅಳವಡಿಸಿಕೊಂಡು ನಾವೆಲ್ಲ ಒಂದೇ ಎಂಬ ಭಾವನೆಯಿಂದ ರಾಜಕೀಯ, ಸಾಮಾಜಿಕವಾಗಿ ಜೊತೆಯಾಗಿ ಸಾಗಬೇಕು. ಇದು ಅಂಬೇಡ್ಕರ್ ಅವರ ಆಶಯವಾಗಿದ್ದು ಅದರಂತೆ ನಾವು ನಡೆದುಕೊಳ್ಳಬೇಕೆಂದರು.

ಶಾಸಕರಾದ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ಇಡೀ ಪ್ರಪಂಚ ಗೌರವಯುತವಾಗಿ, ಪ್ರೀತಿಯಿಂದ ಕಾಣುತ್ತಿದೆ. ಅವರು ಬೆಳೆದು ಬಂದ ರೀತಿ ಮಾದರಿಯಾಗಿದ್ದು ನಮ್ಮೆಲ್ಲರ ಧ್ವನಿ ಅವರು. ಮಹಿಳಾ ಸಮಾಜನತೆ ಬಗ್ಗೆ ಚಿಂತಿಸಿದ ಮೊದಲಿಗರು. ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಸಹ್ಯಾದ್ರಿ ಕಲಾ ಕಾಲೇಜಿನ ಭಾಷಾಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ.ಮೇಟಿ ಮಲ್ಲಿಕಾರ್ಜುನ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಗತ್ತು ಕಂಡ ಮುಖ್ಯ ಚಿಂತಕ. ಲೋಕ ಜ್ಞಾನಿ. 130 ವರ್ಷಗಳ ಕಾಲ ಬೇರೆ ಬೇರೆ ಸ್ವರೂಪದಲ್ಲಿ ಇವರನ್ನು ಅನುಸರಿಸಲಾಗುತ್ತಿದೆ. ಅವರು ಪ್ರತಿಪಾದಿಸಿದ ವಿಚಾರಗಳನ್ನು ರಾಜ್ಯ ಸರ್ಕಾರ 22 ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಸಂಪುಟಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು ಅದನ್ನೆಲ್ಲ ನಾವು ಓದಬೇಕಿದೆ. 537 ವಿಶೇಷ ಭಾಷಣ ಮಾಡಿದ್ದಾರೆ. ಪ್ರಭುತ್ವ ಮತ್ತು ಜನತೆ ಕುರಿತು ಮಹತ್ವದ ಚಿಂತನೆ ನೀಡಿದ್ದಾರೆ.

ಒಟ್ಟಾರೆ ಬದುಕಿನ ಚರ್ಚೆ, ಅವರ ವಿಚಾರಗಳು, ಚಿಂತನೆಗಳು ನಮಗೆ ಒತ್ತಾಸೆಯಾಗಿ, ಬೆನ್ನೆಲುಬಾಗಿ ನಿಂತಿವೆ. ಹಸನಾದ, ವ್ಯವಸ್ಥಿತವಾದ, ಆದರ್ಶ ಬದುಕಿಗೆ ಅವರು ಮಾದರಿಯಾಗಿದ್ದಾರೆ. ಅಸ್ಪೃಶ್ಯರಾಗಿ ಅನೇಕ ಕಷ್ಟಗಳನ್ನು ಸಹಿಸಿದ್ದರೂ ಭಾರತವೆಂಬ ಭವ್ಯ, ಪ್ರಜಾಸತ್ತಾತ್ಮಕ ದೇಶ ಕಟ್ಟಲು ಸಹರಿಯಾಗಿದ್ದಾರೆ. ನೆಮ್ಮದಿಯ ಬದುಕು ಬದುಕಲು ತತ್ವಗಳನ್ನು ರೂಪಿಸಿದ್ದಾರೆ. ಮಹಿಳಾ ಸಬಲೀಕರಣ, ಮಹಿಳೆಯರ ಸ್ವಾಯತ್ತತೆಗಾಗಿ ಅನೇಕ ಯೋಜನೆಗಳನ್ನು ಅವತ್ತೇ ರೂಪಿಸಿದ್ದರು. ಶೈಕ್ಷಣಿಕ, ಆರ್ಥಿಕ, ರಾಜಕೀಯ, ಸಾಮಾಜಿಕ ಚಿಂತನೆಗಳನ್ನು ಕಟ್ಟಿಕೊಡಲು ಅವರು ಬುದ್ದ ಮಾರ್ಗ ಅನುಸರಿಸಿದ್ದಾರೆ.ಅಧ್ಯಯನ ಶೀಲರಾದ ಇವರು ಖಚಿತ ನಿಲುವು ತಾಳುವ ಮುನ್ನ ಅಧ್ಯಯನ ನಡೆಸುತ್ತಿದ್ದರು. ಜಾತ್ಯಾತೀತತೆ ಬಗ್ಗೆ ಸ್ಪಷ್ಟ ತಿಳುವಳಿಕೆ, ನಿಲುವು ಹೊಂದಿದ್ದ ಇವರು ನಮಗೆ ದಾರಿದೀಪ.

ಇವರ ಚಿಂತನೆಗಳು ನಮಗೆ ಊರುಗೋಲಾಗಿವೆ.
ಪೀಠಿಕೆಯಲ್ಲಿ ನಮ್ಮ ದೇಶ ಹೇಗೆ ಸಾಗಬೇಕೆಂಬ ಕುರಿತು ಸ್ಪಷ್ಟ ಸೂತ್ರಗಳನ್ನು ನೀಡಿದ್ದಾರೆ. ಒಂದು ದೇಶಕ್ಕೆ ರಾಜಕೀಯ, ಸಾಮಾಜಿಕ, ಆರ್ಥಿಕ ಸ್ವಾತಂತ್ರ‍್ಯ ಏಕಕಾಲದಲ್ಲಿ ಒದಗಿಬಂದರೆ ಅದು ಮಾದರಿ ದೇಶ ಆಗುತ್ತದೆ ಎಂಬ ವಿಚಾರ ಮಂಡಿಸಿದ್ದಾರೆ. ಅವರ ಚಿಂತನೆ, ವಿಚಾರಗಳನ್ನು ಪ್ರತಿ ಶಾಲಾ ಕಾಲೇಜುಗಳಲ್ಲಿ ಅತ್ಯಂತ ಜತನದಿಂದ ಅಧ್ಯಯನ ಮಾಡಿದರೆ ನಮ್ಮ ದೇಶ ಇನ್ನೂ ಉತ್ತಮ ಮತ್ತು ಮಾದರಿ ದೇಶವಾಗುತ್ತದೆ ಎಂದ ಅವರು ಅವರ ಚಿಂತನೆಗಳು ಕಣ್ಣೆದುರಿನ ಬೆಳಕು. ಅವರ ಚಿಂತನೆ ಚರಂತನವಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆ ಮಾಡಲಾಯಿತು. ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ತುಂಬಿದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ನೀಡಲಾಯಿತು. ಸುಕನ್ಯಾ ಸಮೃದ್ದಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾದೇಶ ಪತ್ರ ನೀಡಲಾಯಿತು. ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು.

ಅಂಬೇಡ್ಕರ್ ಭವನದ ಆವರಣದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜೀವನ ಕುರಿತಾದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.

ವಿಧಾನ ಪರಿಷತ್ ಶಾಸಕರಾದ, ಬಲ್ಕೀಶ್ ಬಾನು, ಡಿ.ಎಸ್.ಅರುಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಕ್ಷರಿ, ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಗಮನಿಸಿ : ಎತ್ತರಕ್ಕೆ ಅನುಗುಣವಾಗಿ ದೇಹದ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ4 ಹೆಚ್ಚುವರಿ ರೈಲು ಸಂಚಾರ.!

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM1 Min Read

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM1 Min Read

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM1 Min Read
Recent News

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM
State News
KARNATAKA

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

By kannadanewsnow5727/02/2026 6:21 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ನಡೆಸಲಾಗುತ್ತಿರುವ…

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.