ಬೆಂಗಳೂರು : ಐದು ವರ್ಷಗಳ ಕಾಲ ನಮ್ಮ ತಂದೆಯವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಇದಕ್ಕೆ ಹೈಕಮಾಂಡ್ ಸಹ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಎಂಎಲ್ಸಿ ಯತೀಂದ್ರ ಹೇಳಿಕೆ ನೀಡಿದ್ದು, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಯತಿಂದ್ರ ನಮ್ಮ ಹೈಕಮಾಂಡ್ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಯತೀಂದ್ರ ಹೇಳಿದ್ದನು?
ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದು, 5 ವರ್ಷಗಳ ಕಾಲ ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸ್ತಾರೆ. ಪಕ್ಷದಲ್ಲಿ ಈಗ ಎಲ್ಲೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗ್ತಿಲ್ಲ. ಮಾಧ್ಯಮಗಳಲ್ಲಿ ಮಾತ್ರ ನಾಯಕತ್ವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಮ್ಮಲ್ಲಿ ಈಗ ಯಾವುದೇ ಗೊಂದಲ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.








