ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರವನ್ನು ಹೈಕಮಾಂಡ್ ಗೆ ಬರೆದಿದ್ದಾರೆ. ರಾಹುಲ್ ಗಾಂಧಿ, ಸುರ್ಜೇವಾಲಾಗೆ ಶಾಸಕರು ಮೊದಲ ಬಾರಿಗೆ ಗೆದ್ದ ಶಾಸಕರಿಂದಲೇ ಪತ್ರ ಬರೆಯಲಾಗಿದೆ.
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ.
ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ಈಗ ಬಹಿರಂಗಗೊಂಡಿದೆ. ಪ್ರಸ್ತುತ ಇರುವ ಸಚಿವ ಸಂಪುಟದಲ್ಲಿ ಬದಲಾವಣೆ ತರಬೇಕು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ 31 ಶಾಸಕರು ಸಹಿ ಮಾಡಿರುವ ಪತ್ರವನ್ನು ಎಐಸಿಸಿ (AICC) ನಾಯಕರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಶಾಸಕರ ಪ್ರಮುಖ ಬೇಡಿಕೆಗಳೇನು?
-
ಹೊಸಬರಿಗೆ ಅವಕಾಶ: ಎರಡೂವರೆ ವರ್ಷಗಳ ನಂತರ ಸಂಪುಟ ಪುನಾರಚನೆ ಮಾಡಲಾಗುವುದು ಎಂಬ ಹಿಂದಿನ ಭರವಸೆಯನ್ನು ಈಡೇರಿಸಬೇಕು.
-
ಕಾರ್ಯಕ್ಷಮತೆ ಆಧಾರಿತ ಬದಲಾವಣೆ: ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಉತ್ಸಾಹಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು.
-
ಪ್ರಾದೇಶಿಕ ಸಮತೋಲನ: ಎಲ್ಲಾ ಜಿಲ್ಲೆಗಳಿಗೂ ಸಮಾನ ಪ್ರಾತಿನಿಧ್ಯ ಸಿಗುವಂತೆ ಸಂಪುಟ ಸರ್ಜರಿ ಮಾಡಬೇಕು.
ಹೈಕಮಾಂಡ್ ನಡೆ ಏನು?
ಈ ಪತ್ರದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್‌ನಿಂದ ಕರೆ ಬರುವ ಸಾಧ್ಯತೆಯಿದೆ. ಬಜೆಟ್ ಅಧಿವೇಶನದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ ಉಸ್ತುವಾರಿ ಸುರ್ಜೇವಾಲ, ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲಾಗಿದೆ. ಮೊದಲ ಬಾರಿ ಆಯ್ಕೆಯಾದಂತ ಐವರು ಶಾಸಕರಿಂದಲೂ ಪತ್ರಕ್ಕೆ ಸಹಿ ಹಾಕಲಾಗಿದೆ.








