Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಾರ್ವಜನಿಕ ಸ್ಥಳಗಳಿಂದ ಬೀದಿನಾಯಿಗಳ ತೆರವು : ತನ್ನ ಆದೇಶ ಮಾರ್ಪಡಿಸಲು ಸುಪ್ರೀಂ ಕೋರ್ಟ್ ನಿರಾಕರಣೆ | Supreme Court

Toilet Sheet: ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ರಹಸ್ಯ ಇಲ್ಲಿದೆ!

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಸಿಎಂ DKS ಪತ್ರ: ಕಾವೇರಿ ಆರತಿಗೆ ಬಗ್ಗೆ ಗೀತ ರಚನೆಗೆ ಮನವಿ
KARNATAKA

ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಸಿಎಂ DKS ಪತ್ರ: ಕಾವೇರಿ ಆರತಿಗೆ ಬಗ್ಗೆ ಗೀತ ರಚನೆಗೆ ಮನವಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.

ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

BIG NEWS: ಆಕೆಯ ಮೇಲೆ ಅತ್ಯಾಚಾರ ನಡೆಸಿಲ್ಲ, ಸಂಸಾರ ಮಾಡಿದ್ದೇನೆ: ಕಿರುತೆರೆ ನಟ ಮಡೆನೂರು ಮನು

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

Share. Facebook Twitter LinkedIn WhatsApp Email

Related Posts

Toilet Sheet: ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ರಹಸ್ಯ ಇಲ್ಲಿದೆ!

2 Mins Read

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

1 Min Read

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

2 Mins Read
Recent News

BREAKING : ಸಾರ್ವಜನಿಕ ಸ್ಥಳಗಳಿಂದ ಬೀದಿನಾಯಿಗಳ ತೆರವು : ತನ್ನ ಆದೇಶ ಮಾರ್ಪಡಿಸಲು ಸುಪ್ರೀಂ ಕೋರ್ಟ್ ನಿರಾಕರಣೆ | Supreme Court

Toilet Sheet: ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ರಹಸ್ಯ ಇಲ್ಲಿದೆ!

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

State News
KARNATAKA

Toilet Sheet: ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ರಹಸ್ಯ ಇಲ್ಲಿದೆ!

By kannadanewsnow57 KARNATAKA 2 Mins Read

ಟಾಯ್ಲೆಟ್ ಕ್ಲೀನ್ ಮಾಡುವುದು ಅಂದ್ರೆ ಸಾಕು, ಹೆಚ್ಚಿನವರು ಮೂಗು ಮುರಿಯುತ್ತಾರೆ. ಬ್ರಷ್ ಹಿಡಿದು ಗಂಟೆಗಟ್ಟಲೆ ಉಜ್ಜುವುದು, ದುಬಾರಿ ಕೆಮಿಕಲ್ ಕ್ಲೀನರ್‌ಗಳನ್ನು…

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.