ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಬಾಯಿಗೆ ಸಿಹಿ ರುಚಿ ಕೊಡುವ ಸಕ್ಕರೆ ಆರೋಗ್ಯಕ್ಕೆ ಮಾತ್ರ ಒಳ್ಳೆಯದಲ್ಲ. ನಿತ್ಯವೂ ಒಂದಲ್ಲ ಒಂದು ರೀತಿಯಲ್ಲಿ ಸಕ್ಕರೆ ಅಂಶ ದೇಹಕ್ಕೆ ಸೇರಿಕೊಳ್ಳುತ್ತದೆ. ಆದರೆ ಸಕ್ಕರೆ ಸೇವನೆಯನ್ನು ಬಿಟ್ಟರೆ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ನಿಮ್ಮ ಆಹಾರದಲ್ಲಿ ಸಕ್ಕರೆ ತೆಗೆದು ಹಾಕುವುದು ತುಂಬಾ ಒಳ್ಳೆಯ ನಿರ್ಧಾರ. ಆದರೆ ಸಕ್ಕರೆ ಸೇವನೆಯನ್ನು ನಿಲ್ಲಿಸೋದು ಅಷ್ಟು ಸುಲಭದ ಮಾತಲ್ಲ. ನಾವೀಗ ಹೇಳುವ ಈ ಪ್ರಯೋಜನಗಳನ್ನು ತಿಳಿದುಕೊಂಡರೆ ಸಕ್ಕರೆ ಸೇವನೆಯನ್ನು ನಿಲ್ಲಿಸಬಹುದು. ಗಟ್ಟಿ ಮನಸ್ಸು ಮಾಡಿ ಸಕ್ಕರೆ ತಿನ್ನೋದನ್ನು ನಿಲ್ಲಿಸಿಬಿಡಿ ಹಾಗು ಆರೋಗ್ಯವಾಗಿರಿ.
ನೀವು ಒಂದು ತಿಂಗಳು ಸಕ್ಕರೆ ಸೇವನೆ ಬಿಟ್ಟರೆ ನಿಮ್ಮ ಮುಂದಿನ ಜೀವನದುದ್ದಕ್ಕೂ ಸಿಹಿಯಾಗಿರಬಹುದು ಎಂದು ತಜ್ಞರು ಹೇಳುತ್ತಾರೆ. ಆರೋಗ್ಯದ ದೃಷ್ಟಿಯಿಂದ ಇದು ತುಂಬಾ ಉತ್ತಮ ಪರಿಣಾಮ ಬೀರುತ್ತದೆ. ಸಕ್ಕರೆ ತಿನ್ನುವುದನ್ನು ನಿಲ್ಲಸಿದರೆ ದೇಹದ ತೂಕ ತನ್ನಂತಾನೇ ಕಡಿಮೆಯಾಗುತ್ತದೆ. ದೇಹಕ್ಕೆ ಹೊಸ ಚೈತನ್ಯ ಉಂಟಾಗುತ್ತದೆ. ಸಕ್ಕರೆ ಬದಲಾಗಿ ಉತ್ತಮ ಪೌಷ್ಟಿಕಾಂಶದ ಆಹಾರಗಳನ್ನು ಸೇವಿಸಿ ಆರೋಗ್ಯವನ್ನು ಸಮತೋಲನದಲ್ಲಿರಿಸಿ.
ಸಕ್ಕರೆಯಿಂದ ಮಾಡಿದ ಪದಾರ್ಥಗಳ ಸೇವನೆ ನಿಲ್ಲಿಸಿದಾಗ ದೇಹಕ್ಕೆ ಉತ್ತಮ ಪೋಷಕಾಂಶಗಳು ಸಿಗುತ್ತವೆ. ಇದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಆಗುತ್ತದೆ. ಸಕ್ಕರೆ ಸೇವನೆ ಬಿಟ್ಟರೆ ಮಧುಮೇಹಿಗಳಾಗುವ ಸಂಭವ ತೀರಾ ಕಡಿಮೆಯಾಗಿರುತ್ತದೆ.
ನೀವು ಸ್ಥೂಲಕಾಯದವರಾಗಿದ್ದರೆ ಸಕ್ಕರೆಯನ್ನು ಸಂಪೂರ್ಣವಾಗಿ ಬಿಟ್ಟು ನೋಡಿ, ಆಗ ನಿಮ್ಮ ದೇಹದಲ್ಲಾಗುವ ಬದಲಾವಣೆಯನ್ನು ಸ್ವತಃ ನೀವೇ ಕಂಡುಕೊಳ್ಳುವಿರಿ. ಸಕ್ಕೆ ಸೇವನೆ ನಿಲ್ಲಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗದೇ ಸ್ಥಿರವಾಗಿರುತ್ತದೆ.
ಸಕ್ಕರೆ ಸೇವನೆ ನಿಲ್ಲಿಸಿದರೆ ದೇಹಕ್ಕೆ ಪೌಷ್ಟಿಕಾಂಶಗಳು ಸೇರುತ್ತವೆ ಹಾಗು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನೂ ಸುಧಾರಿಸುತ್ತದೆ. ಹಾಗಾಗಿ ಸಣ್ಣ ಪುಟ್ಟ ಕಾಯಿಲೆ ಬೀಳುವ ಸಂಭವ ತೀರಾ ಕಡಿಮೆ ಇರುತ್ತದೆ. ಸಕ್ಕರೆ ಸೇವನೆ ನಿಲ್ಲಿಸಿದರೆ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಇನ್ನು ಸಕ್ಕರೆ ತಿಂದರೆ ಹಲ್ಲು ಮತ್ತು ಒಸಡಿನ ಸಮ್ಯೆಗಳೂ ಕಾಣಿಸಿಕೊಳ್ಳುತ್ತವೆ. ಸಕ್ಕರೆಯ ಸೇವನೆಯ ಬದಲಾಗಿ ಉತ್ತಮ ಗುಣಮಟ್ಟದ ಬೆಲ್ಲ ಅಥವಾ ಸಾವಯವ, ರಸಾಯನಿಕಮುಕ್ತ ಬೆಲ್ಲವನ್ನು ಸೇವಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಸಕ್ಕರೆ ಸೇವನೆ ನಿಲ್ಲಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದರೆ ಕೆಲವೊಮ್ಮೆ ಇದು ನಿಮ್ಮ ಆರೋಗ್ಯಕ್ಕೆ ತಿರುಗುಬಾಣವಾದೀತು ಜೋಕೆ. ಆದರೆ ನೀವು ನಿತ್ಯದ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಮುನ್ನ ನಿಮ್ಮ ವೈದ್ಯರನ್ನು ಸಂಪರ್ಕಿಸಿ.
ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.