ಉತ್ತರ ಪ್ರದೇಶ: ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ. ಫೇಸ್ಬುಕ್ನಲ್ಲಿ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.
ಮಾಹಿತಿ ಪ್ರಕಾರ, ಮೊರಾದಾಬಾದ್ ನಿವಾಸಿ ಆತ್ಮ ಪ್ರಕಾಶ್ ಪಂಡಿತ್ ಎಂಬ ವ್ಯಕ್ತಿಯ ಫೇಸ್ ಬುಕ್ ಖಾತೆಯಿಂದ ಆದಿತ್ಯನಾಥ್ ಅವರಿಗೆ ಈ ಬೆದರಿಕೆ ಹಾಕಲಾಗಿದೆ. ಅದೇ ವೇಳೆಗೆ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಿಂದ ಈ ಕೃತ್ಯ ಎಸಗಿರುವುದು ತಿಳಿದು ತಾವೇ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾರೆ. ಸಿಎಂ ಯೋಗಿಗೆ ಈ ಬೆದರಿಕೆಯನ್ನು ಅವರ ಖಾತೆಯನ್ನು ಹ್ಯಾಕ್ ಮಾಡುವ ಮೂಲಕ ಪೇಜ್ ಕ್ರಿಯೇಟ್ ಮಾಡಿ ಪೋಸ್ಟ್ ಮಾಡಲಾಗಿದೆ ಎಂದು ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರ ಎಸ್ಪಿ ಅಖಿಲೇಶ್ ಬದೌರಿಯಾ, ಬೆದರಿಕೆ ಹಾಕುವ ವ್ಯಕ್ತಿಯ ಪ್ರೊಫೈಲ್ನಲ್ಲಿ ಪಾಕಿಸ್ತಾನದ ಧ್ವಜವಿದೆ. ಸಿಎಮ ಯೋಗಿ ಅವನ್ನು ನಿಂದಿಸಿ ತಲೆ ಕತ್ತರಿಸಿದವರಿಗೆ ಎರಡು ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದಾರೆ.
ಸಿಎಂಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಿದಾಗಿನಿಂದ ಪೊಲೀಸ್ ಇಲಾಖೆಯಲ್ಲಿ ಸಂಚಲನ ಉಂಟಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS: ಹುಲಿಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆ ಹಿನ್ನೆಲೆ; ಮತ್ತೆ ಐದು ದಿನಗಳವರೆಗೆ ನಿಷೇಧಾಜ್ಞೆ ವಿಸ್ತರಣೆ
ಉತ್ತರ ಪ್ರದೇಶದಲ್ಲಿ ದಲಿತ ಯುವಕನಿಗೆ ಚಪ್ಪಲಿಯಿಂದ ಥಳಿಸಿದ ಗ್ರಾಮದ ಮುಖ್ಯಸ್ಥ… video viral
BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ : ಆ.26 ರಂದು `ಮಡಿಕೇರಿ ಚಲೋ’ ಗೆ ಕರೆ