ಬೆಳಗಾವಿ: 2018-19ನೇ ಸಾಲಿನ ಬಜೆಟ್ ನಲ್ಲಿ ಮರೆಗುದ್ದಿ ಏತ ನೀರಾವರಿ ಯೋಜನೆಗೆ 100 ಕೋಟಿ ರೂ. ಘೋಷಿಸಲಾಗಿತ್ತು. ಆದರೆ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿಲ್ಲ.
BIGG NEWS: ರಾಜ್ಯದಲ್ಲಿ ಹೆಚ್ಚಾದ ಚಿರತೆ ಹಾವಳಿ; ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ; ಜನರಿಗೆ ಆತಂಕ
ಮುಂದಿನ ಸಭೆಯಲ್ಲಿ ಚರ್ಚಿಸಿ, ಅನುಮೋದನೆ ತೆಗೆದುಕೊಳ್ಳುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆನಂದ್ ಸಿದ್ದು ನ್ಯಾಮಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಈ ವಿಚಾರವಾಗಿ ಪ್ರತಿನಿತ್ಯ ನನ್ನನ್ನು ಬೆನ್ನತ್ತಿದ್ದಾರೆ. ಅವರ ಸೊಸೆ ಮರೆಗುದ್ದಿಯಲ್ಲಿದ್ದು, ಅವರ ಬೀಗರೂರಿಗೆ ಯೋಜನೆ ಮಾಡಬೇಕೆಂದು ಹೇಳುತ್ತಿದ್ದಾರೆ. ಆದ್ದರಿಂದ ಮುಂದಿನ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
BIGG NEWS: ರಾಜ್ಯದಲ್ಲಿ ಹೆಚ್ಚಾದ ಚಿರತೆ ಹಾವಳಿ; ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ; ಜನರಿಗೆ ಆತಂಕ
ಇನ್ನು ತಪ್ಪು ಉತ್ತರ ನೀಡಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಆರೋಪಕ್ಕೆ ಪ್ರತಿಕ್ರಿಯಿಸಿ, ಎಲ್ಲ ಉತ್ತರವನ್ನು ಸರಿಯಾಗಿ ನೀಡಿದ್ದೇವೆ. ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಸರ್ಕಾರದ ಕಚೇರಿಯ ದಾಖಲೆಗಳನ್ನು ನೋಡಿಯೇ ಉತ್ತರ ನೀಡಿದ್ದೇವೆ. ಕೊಂಗ್ಣಿ ನೀರಾವರಿ ಯೋಜನೆಯನ್ನು ಒಂದು ತಿಂಗಳೊಳಗೆ ಮುಗಿಸಿ, ನಿಮ್ಮನ್ನು ಕರೆದು ಉದ್ಘಾಟನೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.