ಬೆಂಗಳೂರು : ತೀವ್ರ ಬರ ಹಾಗೂ ಅತ್ಯಂತ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಇತ್ತೀಚಿಗೆ ಹಲವು ಕಡೆಗಳಲ್ಲಿ ಮಳೆಯಾಗಿ ಜನರ ಮುಖದಲ್ಲಿ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ.ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆ ಸಾಧ್ಯತೆ ಇರಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಇವತ್ತು ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು ಈ ಕುರಿತಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.