ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಧ್ಯ ಮಾರಾಟದಲ್ಲಿ ವ್ಯತ್ಯಯ ಇರಲಿದ್ದು, ಇಂದು ಸಂಜೆ 4 ಗಂಟೆ ನಂತರ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಪರಿಷತ್ ಚುನಾವಣೆ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಮದ್ಯ ಮಾರಾಟ ಸಮಯದಲ್ಲಿ ಬದಲಾವಣೆಯಾಗಲಿದ್ದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ಹೌದು ಜೂನ್ 3 ರಂದು ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 6 ರಂದು ಪರಿಷತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಂಜೆ ನಾಲ್ಕು ಗಂಟೆಯಿಂದ ಜೂನ್ 3 ರವರೆಗೆ ಮದ್ಯದ ಅಂಗಡಿ ಬಂದ್ ಇರಲಿದೆ.
5 ರಂದು ಸಂಜೆ 4ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ ಇರಲಿದ್ದು. ಅಂದು ಆಯ್ದ ಪ್ರದೇಶಗಳಲ್ಲಿ ಮಾತ್ರ ಮಧ್ಯ ಮಾರಾಟಕ್ಕೆ ಅವಕಾಶ ಇರಲಿದೆ.ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬೆಳಿಗ್ಗೆ 6:00 ಯಿಂದ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧ ಇರಲಿದೆ. ಜೂನ್ 5 ರಂದು ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರಲಿದೆ.ಜೂನ್ 6ರ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ಮತ್ತೆ ಮದ್ಯ ಮಾರಾಟ ನಿಷೇಧ ಇರಲಿದೆ. ಮದ್ಯ ಮಾರಾಟ ನಿಷೇಧ ಹಿನ್ನೆಲೆ ಇದೀಗ ಮಧ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.