ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದ ಎಸ್ ಆರ್ ಕೆ ಶುಗರ್ ಕಾರ್ಖಾನೆ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ʻ ಜನವರಿ 15ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದುʼ ಸ್ಪಷ್ಟನೆ ನೀಡಿದ್ದಾರೆ
BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ
ಸುದ್ದಿಗರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಜನವರಿಯಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದ ಜನ ವಿರೋಧಿ ನೀತಿಗಳ ಕುರಿತು ಮತದಾರರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಲಾಗುವುದು ಎಂದರು. 224 ಕ್ಷೇತ್ರದಲ್ಲಿ ಒಮ್ಮೆಲೇ ಸಂಚಾರ ಮಾಡಲು ಸಾಧ್ಯವಾಗುವುದಿಲ್ಲ.
BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ
ಹೀಗಾಗಿ, ಬೇರೆ ಬೇರೆ ತಂಡ ಮಾಡಿ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಚುನಾವಣೆ ಸಮಯದಲ್ಲಿ ಡಿ ಕೆ ಶಿವಕುಮಾರ್ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಾರೆ. ನಾನು ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತಾರೆ. ಹೈಕಮಾಂಡ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡುತ್ತಾರೋ ಆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಅದು ಬಾದಾಮಿ ಆಗಲಿ, ಕೋಲಾರ ಆಗಲಿ, ವರುಣ ಅಥವಾ ಯಾವುದೇ ಕ್ಷೇತ್ರವಾಗಲಿ ಎಂದು ತಿಳಿಸಿದರು.