ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ ಎಂದಿದ್ದಾರೆ.
ಜೊತೆಗೆ ವಿದ್ಯಾರ್ಥಿಗಳಿಗೆ ಎಲ್.ಕೆ.ಜಿ, ಯು.ಕೆ.ಜಿ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುವುದು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
BREAKING: ಸಚಿವ ಕೆ.ಜೆ ಜಾರ್ಜ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಕುರಿತು ರಹಸ್ಯ ಮಾತುಕತೆ?








