ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.@CMofKarnataka @siddaramaiah @MBPatil pic.twitter.com/U7ZjSf8Ie2
— DIPR Karnataka (@KarnatakaVarthe) October 19, 2024
ರಾಜ್ಯದಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು’ ಎಂದು ವಿವರಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.
ರಾಜ್ಯದ 1,000 ಶಿಕ್ಷಕರಿಗೆ ಬೋಧನಾ ಸಂಪನ್ಮೂಲಕ್ಕೆ ‘AI ತಂತ್ರಜ್ಞಾನ’ದ ಮೂಲಕ ತರಬೇತಿ: ಸಚಿವ ಮಧು ಬಂಗಾರಪ್ಪ
BREAKING: ನ.1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ