ದಾವಣಗೆರೆ : ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಹಾಗೂ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ನೀಡಿದರು.
ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಸಚಿವ ಜಿ ಪರಮೇಶ್ವರ್ ಭೇಟಿ ನೀಡಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಲಾಕಪ್ ಡೆತ್ ಆರೋಪ ಮಾಡಿ ದುಷ್ಕರ್ಮಿಗಳು ಕಲ್ಲು ತೂರಿ ದಾಂಧಲೆ ನಡೆಸಿದ್ದರು. ನಂತರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ಹಸ್ತಾಂತರಿಸಿತ್ತು.
ಈ ವೇಳೆ ಪೂರ್ವ ವಲಯ ಐಜಿಪಿ, ಹಾಗೂ ಎಸ್‌ಪಿ ಉಮಾ ಪ್ರಶಾಂತ್ ಅವರಿಂದ ಗೃಹ ಸಚಿವ ಜಿ. ಪರಮೇಶ್ವರ್ ಘಟನೆಯ ಕುರಿತು ಮಾಹಿತಿ ಪಡೆದಿದ್ದಾರೆ.ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್, ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಮತಿತರರು ಗೃಹ ಸಚಿವರಿಗೆ ಸಾಥ್ ನೀಡಿದರು.