ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ನೀಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಮಾಡಲಾಗಿತ್ತು. ಇಂತಹ ಅವರಿಗೆ ಇಂದು ನಡೆದಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಂದು ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಂತ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ಮುಖ್ಯ ಅತಿಥಿಗಳಾಗಿ ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಆರ್.ವೆಂಕಟೇಶ್ ಜೊತೆಗೂಡಿ ಪ್ರಶಸ್ತಿ ಪ್ರದಾನ ಮಾಡಿದರು.
ಈ ಕಾರ್ಯಕ್ರಮವನ್ನು ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಕಾರ್ಯಕ್ರಮ ಉದ್ಘಾಟಿಸಿದರೇ, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ ಅವರು ಅಭಿನಂದನಾ ಭಾಷಣ ಮಾಡಿದರು.
ರೈತ, ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿತ್ತು.
ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ)ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಸೇರಿದಂತೆ ಇತರೆ ಗಣ್ಯರು ಲೋಹಿಯಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ- ಸಚಿವ ಎಂ.ಬಿ ಪಾಟೀಲ್








