ಬೆಂಗಳೂರು : ರಾಷ್ಟ್ರೀಯ ಲೋಕ್ ಅದಾಲತ್ನ್ನು ಈ ಹಿಂದೆ ಮಾರ್ಚ್ 9 ರಂದು ನಿಗಧಿಯಾಗಿದ್ದು, ದಿನಾಂಕವನ್ನು ಮಾರ್ಚ್ 16 ಕ್ಕೆ ಮುಂದೂಡಲಾಗಿದೆ. ಸಾರ್ವಜನಿಕರು ಬಾಕಿ ಉಳಿದಿರುವ ವ್ಯಾಜ್ಯಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ- 15100 ಮತ್ತು 1800-425-90900 ಜಾಲತಾಣ www.kslsa.kar.nic.in ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.