ನವದೆಹಲಿ:ಗುಜರಾತ್ನ ಉದ್ಯಮಿಯೊಬ್ಬರಿಗೆ ಯೋಜನೆಯನ್ನು ಹಂಚಿಕೆ ಮಾಡಿರುವುದನ್ನು ವಿರೋಧಿಸಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು
ಸದನ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಯೋಜನಾ ಹಂಚಿಕೆಯ ವಿಷಯವನ್ನು ಎತ್ತಲು ಪ್ರಯತ್ನಿಸಿದರು.
ಇದರಿಂದ ಸಿಟ್ಟಿಗೆದ್ದ ಸ್ಪೀಕರ್ ಓಂ ಬಿರ್ಲಾ ಅವರು ಸದನದ ಕಲಾಪಕ್ಕೆ ಅಡ್ಡಿಪಡಿಸದಂತೆ ಪ್ರತಿಭಟನಾನಿರತ ಸದಸ್ಯರಿಗೆ ತಿಳಿಸಿದರು ಮತ್ತು ಸದನದ ಸಂಪ್ರದಾಯವನ್ನು ಅನುಸರಿಸುವಂತೆ ಒತ್ತಾಯಿಸಿದರು.
ಸದನವು ಕಾರ್ಯನಿರ್ವಹಿಸಲು ನಿಮಗೆ ಇಷ್ಟವಿಲ್ಲವೇ ಎಂದು ಅವರು ಸದಸ್ಯರನ್ನು ಕೇಳಿದರು ಮತ್ತು ಪ್ರತಿಭಟನೆಗಳು ಮುಂದುವರೆದಿದ್ದರಿಂದ, ಕಲಾಪವನ್ನು ಐದು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಮಧ್ಯಾಹ್ನ 2 ರವರೆಗೆ ಮುಂದೂಡಲಾಯಿತು.
ಪ್ರಶ್ನೋತ್ತರ ವೇಳೆಯಲ್ಲಿ ಒಂದು ಪ್ರಶ್ನೆಯನ್ನು ಕೈಗೆತ್ತಿಕೊಳ್ಳಲಾಯಿತು.