ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ನಡೆದಂತ ಚುನಾವಣೆಯ ಮತದಾನದ ನಂತ್ರ, ಇಂದು ಮತಏಣಿಕೆ ಕಾರ್ಯ ನಡೆಯಿತು. ಇಂದಿನ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಯಾವ ಕ್ಷೇತ್ರದಲ್ಲಿ ಯಾರು ಗೆಲುವು? ಯಾರು ಸೋಲು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.
ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಮಾಲ್ ಮೆರೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಾವುದೇ ಪ್ರಭಾವವನ್ನು ಮತದಾರರ ಮೇಲೆ ಬೀರಿಲ್ಲ ಎಂಬುದು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದ ಮೂಲಕ ಗೊತ್ತಾಗಿದೆ.
ಕೋಲಾರ ಲೋಕಸಭಾ ಕ್ಷೇತ್ರ – ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಗೆಲುವು ಕಂಡ್ರೆ, ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ. 45 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರ– ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಅವರು 63 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲು ಕಂಡಿದ್ದಾರೆ. ಸುಮಾರು 80 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರ – ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಸೋಲು ಕಂಡಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರ – ಎರಡು ದಶಕಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ. 1999ರಲ್ಲಿ ದೇವೇಗೌಡ ಅವರನ್ನು ಸೋಲಿಸಿದ್ದಂತ ಪುಟ್ಟಸ್ವಾಮಿಗೌಡ ಅವರ ಮೊಮ್ಮಗನಿಂದ ಈಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ – ಈ ಕ್ಷೇತ್ರದಲ್ಲಿ ಹೃದಯವಂತ ಡಾಕ್ಟರ್ ಮತದಾರರ ಹೃದಯವನ್ನು ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಸೋಲು ಕಂಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಈ ಬೆನ್ನಲ್ಲೇ ಟೆಂಬಲ್ ರನ್ ಆರಂಭಿಸಿರೋ ಅವರು, ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರ – ಕಾಂಗ್ರೆಸ್ ಅಭ್ಯರಪ್ಥಿ ರಾಜಶೇಖರ ಹಿಟ್ನಾಳ್ ಜಯಭೇರಿ ಭಾರಿಸಿದ್ದಾರೆ. 45 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರ – ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 6ನೇ ಸಲ ಬಿಜೆಪಿ ಕಮಾಲ್ ಮೆರೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರ – ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ. 1.25 ಲಕ್ಷ ಮತಗಳ ಅಂತರದಿಂದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಜಯ ಸಾಧಿಸಿದ್ದಾರೆ. ಅಲ್ಲದೇ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಚಿಕ್ಕ ಸಂಸದರಾಗಿ ಆಯ್ಕೆಯಾದಂತೆ ಆಗಿದೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರ – ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೇಲ್ ವಿರುದ್ಧ, ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ – ಬಿಜೆಪಿಯ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ.
BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು
BREAKING : ಷೇರುಮಾರುಕಟ್ಟೆಯಲ್ಲಿ ಮತ್ತೆ ಭಾರೀ ಕುಸಿತ: ಹೂಡಿಕೆದಾರರಿಗೆ 26 ಲಕ್ಷ ಕೋಟಿ ನಷ್ಟ!