ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಲೋಕಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ಶುರುವಾಗಿದ್ದು, ಈವರೆಗಿನ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಪಕ್ಷ ಇನ್ನೂ ಮ್ಯಾಜಿಕ್ ನಂಬರ್ ತಲುಪಿಲ್ಲ. ಈವರೆಗೆ ಬಿಜೆಪಿ ೨೩೭ ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಆದರೆ ಬಿಜೆಪಿ ಮೈತ್ರಿ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಏತನ್ಮಧ್ಯೆ, ಚುನಾವಣೋತ್ತರ ಸಮೀಕ್ಷೆಗಳನ್ನು ಮೀರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣವು 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎನ್ಡಿಎ ಮತ್ತು ಇಂಡಿಯಾ ಬಣದ ನಡುವೆ ಕಠಿಣ ಹೋರಾಟ ನಡೆಯುತ್ತಿದೆ.
ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಹತ್ತು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.