ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ನಡೆದಿದ್ದಂತ ಮತದಾನದ ನಂತ್ರ ಇಂದು ಮತಏಣಿಕೆ ಕಾರ್ಯ ನಡೆಯಿತು. ಈ ಮತಏಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿ್ದದಾರೆ.
ಇಂದು ಲೋಕಸಭಾ ಚುನಾವಣೆಗೆ ನಡೆದಂತ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಚಿತ್ರದುರ್ಗ ಲೋಕಸಭಾ ಚುನಾವಣಾ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರು 5,75,404 ಮತಗಳನ್ನು ಗಳಿಸಿದ್ರೇ, ಬಿಜೆಪಿಯ ಗೋವಿಂದ ಕಾರಜೋಳ ಅವರು 6,14,890 ಮತಗಳನ್ನು ಪಡೆದರು.
ಒಟ್ಟಾರೆಯಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 45849 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಧೋಳ ವ್ಯಕ್ತಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಕೈ ವಶವಾದಂತೆ ಆಗಿದೆ.
BREAKING: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್: ಲೋಕಸಭಾ ಚುನಾವಣೆಯಲ್ಲಿ ಸೋಲು
BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು