ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು, ಕೋಲಾರ ಲೋಕಸಭೆಗೆ ಕೆ.ಹೆಚ್ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣನಿಗೆ ಟಿಕೆಟ್ ನೀಡದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಐವರು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೊತ್ತರು ಮಂಜುನಾಥ್, ಸಚಿವ ಸುಧಾಕರ್, ನಜೀರ್ ಆಹ್ಮದ್, ಅನಿಲ್ ಕುಮಾರ್ ಸೇರಿದಂತೆ ಐವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ನಡುವೆ ಒಂದು ವೇಳೆ ತಮಗೆ ಟಿಕೆಟ್ ನೀಡಿದರೆ ಒಟ್ಟಾಗಿ ಕೆಲಸ ಮಾಡ್ತೀವಿ ಅಂಥ ಕೆ.ಹೆಚ್ ಮುನಿಯಪ್ಪ ಅವರು ಹೇಳಿದ್ದು, ಏನೇ ಆದ್ರೂ ಹೈಕಮಾಂಡ್ ತೀರ್ಮಾನವೇ ಅಂಥ ಅಂಥ ಹೇಳಿದ್ದಾರೆ. ಕೋಲಾರದಲ್ಲಿ ಕೆ.ಹೆಚ್ ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣವಿದ್ದು, ಇಲ್ಲಿ ಒಬ್ಬರನ್ನು ಕಂಡರೇ ಒಬ್ರಿಗೆ ಆಗೋದು ಇಲ್ಲ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಶಯವಾಗಿದೆ.