ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಯತಿಂದ್ರ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಅವರು ಟೀಕಿಸಿದರು.