ಚಿಕ್ಕಮಗಳೂರು : ಚಿಕ್ಕಮಂಗಳೂರು ಹಾಗೂ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಹೌದು ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಕಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ.
ಈ ಗೆಲುವಿನ ಹಿಂದೆ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳದ ನೂರಾರು ನಾಯಕರು, ಸಹಸ್ರಾರು ಕಾರ್ಯಕರ್ತರ ಶ್ರಮವಿದೆ. ಒಂದೊಂದು ಮತಕ್ಕೂ ಬೆಲೆ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರಿಗೆ ವಂದನೆಗಳು…ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ.
ಇದು ಕಾರ್ಯಕರ್ತರ ಗೆಲುವು🙏
— Kota Shrinivas Poojari (ಮೋದಿಜೀ ಪರಿವಾರ) (@KotasBJP) June 4, 2024