*ಅವಿನಾಶ್ ಆರ್ ಭೀಮಸಂದ್ರ
ನವದೆಹಲಿ: ಲೋಕಸಭಾ ಚುನಾವಣೆಗೆ ಇಂದು ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟ ಮಾಡಲಾಗಿದೆ. ಇದರೊಂದಿಗೆ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ವೇದಿಕೆಯನ್ನು ಸಿದ್ದಪಡಿಸಿಕೊಳ್ಳುವುದಕ್ಕೆ ಸಿದ್ದವಾಗಿದ್ದರೇ, ಕಾಂಗ್ರೆಸ್ ದಶಕದ ಬಳಿಕ ಅಧಿಕಾರಕ್ಕೆ ಬರಲು ಶ್ರಮ ಪಡುತ್ತಿದೆ. ವೇಳಾಪಟ್ಟಿ ತಿಳಿಸಿದ ಬಳಿಕ ಕೂಡಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರು ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಿದ್ದಾರೆ. ಇನ್ನೂ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಪ್ರಕಟಿಸಲಿದೆ. ಲೋಕಸಭಾ ಚುನಾವಣೆ ಏಳರಿಂದ ಎಂಟು ಹಂತಗಳಲ್ಲಿ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಲೋಕಸಭಾ ಚುನಾವಣೆಯಲ್ಲಿ ಸತತ ಮೂರನೇ ಗೆಲುವನ್ನು ಎದುರು ನೋಡುತ್ತಿದೆ, ಕಾಂಗ್ರೆಸ್ ನೇತೃತ್ವದ ಎನ್ಡಿಎ ಮೈತ್ರಿಕೂಟವು ಪ್ರಬಲ ಹೋರಾಟವನ್ನು ನೀಡುವ ಭರವಸೆಯಲ್ಲಿದೆ.
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16 ರಂದು ಕೊನೆಗೊಳ್ಳುತ್ತದೆ ಮತ್ತು ಅದಕ್ಕೂ ಮೊದಲು ಹೊಸ ಸದನವನ್ನು ರಚಿಸಬೇಕಾಗಿದೆ. ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳು ಏಪ್ರಿಲ್ / ಮೇ ತಿಂಗಳಲ್ಲಿ ಮತದಾನ ಮಾಡುವ ನಿರೀಕ್ಷೆಯಿದೆ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಮತದಾನ ಮಾಡಲಿವೆ.
Lok Sabha poll dates to be announcedtoday