ನವದೆಹಲಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಅದೇ ರೀತಿಯಾಗಿ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾವಾಗ ಬೇಕಾದರೂ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬಹುದು ಎಂದು ತಿಳಿಸಿದ್ದಾರೆ.
BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವಾಗ ಬೇಕಾದರೂ ಅಭ್ಯರ್ಥಿ ಘೋಷಣೆ ಆಗಬಹುದು .ಎ ಐ ಸಿ ಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೇಗ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತರೆ.ಅಭ್ಯರ್ಥಿ ಆಯ್ಕೆ ಬಗ್ಗೆ ನಿನ್ನೆ ಸಭೆ ನಡೆಯಿತು ಪಕ್ಷ ಸಂಘಟನೆ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಇನ್ನು ಮುಖ್ಯಮಂತ್ರಿ ಸ್ಥಾನದ ಕುರಿತಾಗಿ ಸಚಿವ ಎಚ್ ಸಿ ಮಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆಸಿದ ಅವರು, ಒಳ್ಳೆದಾಗ್ಲಿ, ಆಸೆ ಪಡೋರು ಆಸೆಪಡಲಿ ತಪ್ಪಿಲ್ಲ. ಯಾರ್ಯಾರು ಏನೇನು ಆಸೆ ಪಡುತ್ತಾರಂತೆ. ಹಾಗಾಗಿ ಮಹದೇವಪ್ಪ ಕೂಡ ಆ ರೀತಿ ಹೇಳುವುದರಲ್ಲಿ ತಪ್ಪಿಲ್ಲ ಎಂದು ಅವರು ತಿಳಿಸಿದರು.