ಬೆಂಗಳೂರು : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ ಮಾಡಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.
ಮಾದರಿ ನೀತಿ ಸಂಹಿತೆ ತಕ್ಷಣದಿಂದಲೆ ಜಾರಿಯಾಗಿರುವುದರಿಂದ ರಾಜಕೀಯ ಸಭೆ, ಸಮಾರಂಭಕ್ಕೆ ಪರವಾನಿಗೆ ಕಡ್ಡಾಯವಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಅಥವಾ ತಾಲೂಕಾ ಮಟ್ಟದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಸುವಿಧಾ ಮೂಲಕ ಪರವಾನಿಗೆ ಪಡೆಯಬೇಕು. ಅತಿಥಿಗೃಹಗಳು ಜಿಲ್ಲಾ ಚುನಾವಣಾಧಿಕಾರಿಗಳ ಅಧಿಗ್ರಹಣದಲ್ಲಿರುವುದರಿಂದ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ ಪ್ರವಾಸಿ ಮಂದಿರ ನಿಷೇಧಿಸಲಾಗಿದೆ. ಮತದಾರರ ಮೇಲೆ ಪ್ರಭಾವ ಭೀರುವ ಸರ್ಕಾರಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು. ಆದರೆ ಕುಡಿಯುವ ನೀರು, ಬರ ಪರಿಹಾರ ಕಾರ್ಯಗಳು ಎಂದಿನಂತೆ ನಡೆಯಲಿವೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?
1) ಚಿತ್ರದುರ್ಗ
2) ಉಡುಪಿ-ಚಿಕ್ಕಮಗಳೂರು
3) ದಕ್ಷಿಣ ಕನ್ನಡ
4) ಹಾಸನ
5) ತುಮಕೂರು
6) ಚಿಕ್ಕಬಳ್ಳಾಪುರ
7) ಕೋಲಾರ
8) ಮಂಡ್ಯ
9) ಮೈಸೂರು-ಕೊಡಗು
10) ಚಾಮರಾಜನಗರ
11) ಬೆಂಗಳೂರು ಗ್ರಾಮಾಂತರ
12) ಬೆಂಗಳೂರು ದಕ್ಷಿಣ
13) ಬೆಂಗಳೂರು ಉತ್ತರ
14) ಬೆಂಗಳೂರು ಕೇಂದ್ರ
ಮೇ 7ರಂದು ಎಲ್ಲೆಲ್ಲಿ ಮತದಾನ?
1) ಬೆಳಗಾವಿ
2) ಬಳ್ಳಾರಿ
3) ಚಿಕ್ಕೋಡಿ
4) ಹಾವೇರಿ-ಗದಗ
5) ಕಲಬುರಗಿ
6) ಬೀದರ್
7) ಹುಬ್ಬಳಿ – ಧಾರವಾಡ
8) ಕೊಪ್ಪಳ
9) ರಾಯಚೂರು
10) ಉತ್ತರ ಕನ್ನಡ
11) ದಾವಣಗೆರೆ
12) ಶಿವಮೊಗ್ಗ
13) ಬಾಗಲಕೋಟೆ
14) ವಿಜಯಪುರ