ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಇನ್ನು ಯಾವುದೇ ತೀರ್ಮಾನ ಆಗಿಲ್ಲ ಎಂಬುದಾಗಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದ ಪಾಂಡವಪುರದಲ್ಲಿ ಮಾತನಾಡಿದಂತ ಅವರು, ಕಳೆದ 1 ತಿಂಗಳಿಂದ ಯಾವ ರೀತಿ ಚುನಾವಣೆ ಎದುರಿಸಬೇಕು ಅನ್ನೋ ತಯಾರಿ ಆಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯದಲ್ಲಿ ಪಕ್ಷ ಕಟ್ಟುವಲ್ಲಿ ಓಡಾಟ ಮಾಡಬೇಕು. ಹಿಂದೆ 2019ರಲ್ಲಿ ಮಂಡ್ಯದಿಂದ ನಾನು ಸ್ಪರ್ಧೆ ಮಾಡಿದ್ದೆ ಹೀಗಾಗಿ ಮಂಡ್ಯದಲ್ಲಿ ನಾನು ಸಕ್ರಿಯವಾಗಿ ಇರಬೇಕು ಎಂಬ ಸೂಚನೆ ಇದೆ. ಮುಂದೆ ಮಂಡ್ಯದ 8 ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಮಾಡ್ತಿನಿ ಎಂದರು.
ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಗೊಂದಲದ ವಿಚಾರವಾಗಿ ಮಾತನಾಡಿದ ಅವರು, ಮೈಸೂರಿನಲ್ಲಿ ಸಭೆ ನಡೆಸಿ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ನಮ್ಮ ಪಕ್ಷದವ್ರಲ್ಲಿ ಯಾವುದೇ ಗೊಂದಲ ಇಲ್ಲ. ನಾವು ಯಾರು ಯಾವುದಕ್ಕೂ ಪ್ರತಿಕ್ರಿಯೆ ನೀಡ್ತಿಲ್ಲ. ಇದು ಆರೋಗ್ಯಕರ ಚುನಾವಣೆ ಆಗಬೇಕು. ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು. ದೇವೇಗೌಡರು ಈಗಾಗಲೇ ಮೋದಿ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ. ನಾವು ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡಲ್ಲ ಎಂದರು.
ಮಂಡ್ಯದಲ್ಲಿ ಸ್ಪರ್ಧೆ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಈಗಾಗಲೇ ಸಾಕಷ್ಟು ಬಾರಿ ಇದರ ಬಗ್ಗೆ ಹೇಳಿದ್ದೇನೆ. ಕೊನೆದಾಗಿ ಹೇಳ್ತಿದ್ದೀನಿ ಮಂಡ್ಯದಲ್ಲಿ ಈ ಬಾರಿ ನನ್ನ ಸ್ಪರ್ಧೆ ಇಲ್ಲ. ಯಾವ ಒತ್ತಡಕ್ಕೂ ಮಣಿದು ನಾನು ಸ್ಪರ್ಧೆ ಮಾಡಲ್ಲ. 2019ರ ಸೋಲಿನ ಬಗ್ಗೆ ಮಾತನಾಡಲ್ಲ. ನಡೆದಿರುವ ಬಗ್ಗೆ ಮರೆತು ಮುಂದೆ ಹೋಗಬೇಕು. ಕುಮಾರಸ್ವಾಮಿಯವರ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ಕಾರ್ಯಕರ್ತರು ನಾಯಕರ ಒತ್ತಡ ಕುಮಾರಸ್ವಾಮಿ ಅವ್ರಿಗೆ ಇದೆ ಎಂದರು.
ವರದಿ: ಗಿರೀಶ್ ರಾಜ್, ಮಂಡ್ಯ
‘ರಾಮನಗರ’ವನ್ನು ‘ಮಾದರಿ ಜಿಲ್ಲೆ’ಯಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ – ಡಿಸಿಎಂ ಡಿ.ಕೆ. ಶಿವಕುಮಾರ್
ಫೆ.25ರಂದು 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ‘ಲಿಖಿತ ಪರೀಕ್ಷೆ’, ಈ ‘ನಿಯಮ’ಗಳ ಪಾಲನೆ ಕಡ್ಡಾಯ