ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ವಿವಿಧ ತನಿಖಾ ತಂಡಗಳು 5.85 ಕೋಟಿ ರೂ.ನಗದು ಸೇರಿದಂತೆ ಏಳು ಕೋಟಿ ರೂ. ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿ ಮಾಡಿವೆ.
ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 27.62 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯಾದ್ಯಂತ ಈವರೆಗೆ 5.87 ಲಕ್ಷ ರೂ. ಮೌಲ್ಯದ ಉಚಿತ ಉಡುಗೊರೆಗಳು, 6.84 ಲಕ್ಷ ರೂ. ಮೌಲ್ಯದ 2148 ಲಕ್ಷ ಲೀಟರ್ ಮದ್ಯ, 15.21 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿಮಾಡಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 2.93ಕೋಟಿ ರೂ. ನಗದು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ 32.92 ಲಕ್ಷ ರೂ.ಗಳನ್ನು ಜಪ್ತಿ ಮಾಡಲಾಗಿದೆ.