ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) 1 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಮತ jointceomcc@gmail.com ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಉಪ ಮುಖ್ಯ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.