ತುಮಕೂರು : ಸ್ವ ಪಕ್ಷದ ವಿರುದ್ಧವೇ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಅಸಮಾಧಾನಗೊಂಡಿರುವ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ವರಿಷ್ಠರನ್ನು ಭೇಟಿಯಾಗಲು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ.
ಅಲ್ಲದೆ ನಿನ್ನೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಮಾಜಿ ಸಚಿವ ವಿ ಸೋಮಣ್ಣ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ ಅಲ್ಲದೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮಣ್ಣ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ಇತ್ತ ತುಮಕೂರಿನಲ್ಲಿ ವಿ ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸಲು ಯತ್ನಿಸಲಾಗುತ್ತಿದ್ದೂ, ಹಾಲಿ ಸಂಸದ ಬಿಎಸ್ ಬಸವರಾಜು ಸೋಮಣ್ಣಗೆ ಟಿಕೆಟ್ ಕೊಡಿಸಲು ಲಾಬಿ ಮಾಡುತ್ತಿದ್ದು ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಬಿಎಸ್ ಬಸವರಾಜು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ.
ವಿ. ಸೋಮಣ್ಣ ಪರ ಹಾಲಿ ಸಂಸದ ಬಿಎಸ್ ಬಸವರಾಜು ಬ್ಯಾಟ್ ಬೀಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಸೇರಿದಂತ್ವ ಇತರ ವಿಷಯಗಳ ಕುರಿತು ದೆಹಲಿಯಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ವಿ. ಸೋಮಣ್ಣ ಭೇಟಿಯಾಗಲಿದ್ದಾರೆ. ತುಮಕೂರು ಕ್ಷೇತ್ರದಿಂದ ವಿ ಸೋಮಣ್ಣ ಸ್ಪರ್ಧೆ ಬಗ್ಗೆ ಇಂದು ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.