ನವದೆಹಲಿ: ಇಂದು ರಾಜ್ಯದ ಲೋಕಸಭಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸೋ ಸಂಬಂಧ ಚರ್ಚಿಸಲಾಗಿದೆ. ಆದರೇ ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಸಿಇಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಸಂಬಂಧ ಚರ್ಚೆ ನಡೆಸಲಾಗಿದೆ. ಆದರೇ ಅಂತಿಮಗೊಂಡಿಲ್ಲ ಎಂದರು.

ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸೋ ಸಾಧ್ಯತೆ ಇದೆ. ಹೀಗಾಗಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಲ್ಲ. ನಾಳೆ ಬಿಡುಗಡೆಯಾಗಬಹುದು ಎಂದು ತಿಳಿಸಿದರು.

ಲೋಕಸಭಾ ಚುನಾವಣೆ: ನಾಳೆ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಗ್ಗೆ ಫೈನಲ್- ಬಿವೈ ವಿಜಯೇಂದ್ರ

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘2000 ವೇತನ’ ಹೆಚ್ಚಳ- ಸಿಎಂ ಭರವಸೆ

Share.
Exit mobile version