ಮಂಡ್ಯ: 2024ರ ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಹೀಗಾಗಿ ನಾಳೆಯಿಂದಲೇ ಲೋಕಸಭಾ ಚುನಾವಣೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸೋದಕ್ಕೆ ಆರಂಭಗೊಳ್ಳಲಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 04 ಆಗಿದೆ. ನಾಮಪತ್ರ ಪರಿಶೀಲನೆ ನಡೆಸುವ ದಿನಾಂಕ ಏ.05 ಆಗಿರುತ್ತದೆ. ನಾಮಪತ್ರ ವಾಪಸ್ ಪಡೆಯುವ ದಿನ ಏ.08 ಆಗಿದೆ ಎಂದು ಹೇಳಿದ್ದಾರೆ.
ಮತದಾನದ ದಿನಾಂಕ ಏ.26 ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಗೆ ಅವಕಾಶ ನೀಡಲಾಗಿದೆ. ಮತದಾನ ಎಣಿಕೆ ಮಾಡುವ ದಿನಾಂಕ ಜೂನ್ 04ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರವನ್ನು ಸಲ್ಲಿಸಬಹುದು ಎಂದರು.
ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ 100ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ಚುನಾವಣಾಧಿಕಾರಿಗಳ ಕಛೇರಿಗೆ ಕೇವಲ ಮೂರು ವಾಹನ ಹಾಗೂ ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಸೇರಿ 5 ಜನರಿಗೆ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಚೇರಿಯಲ್ಲೊ ಸಿಸಿಟಿವಿ ಅಳವಡಿಕೆ ಹಾಗೂ ಪ್ರತ್ಯೇಕ ವಿಡಿಯೋ ರೆಕಾರ್ಡಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,59,175 ಮತದಾರರು. 8,67,652 ಪುರುಷ ಮತದಾರರು. 8,91,355 ಮಹಿಳಾ ಮತದಾರರು. ಇತರೆ 168 ಮತದಾರರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 35,140 ಯುವ ಮತದಾರರು. 85 ವರ್ಷ ಮೇಲ್ಪಟ್ಟ ಮತದಾರರು 23,044. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2,074 ಮತಗಟ್ಟೆಗಳು ಇದ್ದಾವೆ ಎಂದರು.
ನಾಮಪತ್ರ ಸಲ್ಲಿಸಿದ ದಿನದಿಂದ ಅಭ್ಯರ್ಥಿಯ ಚುನಾವಣೆ ವೆಚ್ಚ ಪರಿಗಣನೆ ಮಾಡಲಾಗುತ್ತದೆ. ಅಭ್ಯರ್ಥಿಗೆ 25 ಸಾವಿರ ಠೇವಣಿ, SC/ST ಗೆ 12,500 ರೂ ಠೇವಣಿ ನಿಗದಿ ಇರಿಸೋದು ಕಡ್ಡಾಯವಾಗಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಹೊಸ ಬ್ಯಾಂಕ್ ಖಾತೆ ತೆರೆದು ಚುನಾವಣೆ ವೆಚ್ಚ ವಹಿವಾಟು ನಡೆಸಲು ಸೂಚನೆ ನೀಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಚುನಾವಣೆಯ ವೇಳೆ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ. ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ. ಮಂಡ್ಯ ಜಿಲ್ಲೆಯ ಜನರು ಸಹಕರಿಸುವಂತೆ ಡಿಸಿ ಡಾ.ಕುಮಾರ ಮನವಿ ಮಾಡಿದರು.
ಖಾಸಗಿ ಕಾರ್ಯಕ್ರಮಕ್ಕೆ ಮದುವೆ ಗಳಿಗೆ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ರಾಜಕೀಯ ವೇದಿಕೆ ಕಾರ್ಯಕ್ರಮಕ್ಕೆ ಪ್ರಚಾರಕ್ಕೆ ಅನುಮತಿ ಕಡ್ಡಾಯವಾಗಿದೆ ಎಂದು ಸ್ಪಷ್ಟ ಪಡಿಸಿದರು.
ವರದಿ: ಗಿರೀಶ್ ರಾಜ್, ಮಂಡ್ಯ
BREAKING: ಬೆಂಗಳೂರಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರವಾಗಿ ಕೊಚ್ಚಿ ಕೊಲೆ
BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’