ನವದೆಹಲಿ: ಲೋಕಸಭಾ ಚುನಾವಣೆ 2024 ರ ಚುನಾವಣೋತ್ತರ ಸಮೀಕ್ಷೆಗಳ ನಿಷೇಧದ ಬಗ್ಗೆ ಭಾರತದ ಚುನಾವಣಾ ಆಯೋಗ (ಇಸಿಐ) ವಿವರಗಳನ್ನು ಹಂಚಿಕೊಂಡಿದೆ.

ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಜೂನ್ 1 ರ ಸಂಜೆ 6.30 ರವರೆಗೆ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಯೋಗ, ಅಭಿಪ್ರಾಯ ಸಂಗ್ರಹ ಅಥವಾ ಚುನಾವಣಾ ಸಮೀಕ್ಷೆಯ ಫಲಿತಾಂಶವೂ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಚಾರವನ್ನು, ನಿಗದಿಯಂತೆ ಚುನಾವಣೆ ಮುಗಿಯುವವರೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದನ್ನು ಜನಪ್ರತಿನಿಧಿಗಳ ಕಾಯ್ದೆ ಅನುಸಾರ ನಿರ್ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

Share.
Exit mobile version