ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದ್ದು ದೇಶದಲ್ಲಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಏಪ್ರಿಲ್ 26ರಂದು ಮೊದಲೇ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
ಅದೇ ರೀತಿಯಾಗಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು ಏಪ್ರಿಲ್ 12ರಂದು ನಾಮಿನೇಷನ್ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 19 ರಂದು ನಾಮಿನೇಷನ್ ಗೆ ಕೊನೆಯ ದಿನ ಇರಲಿದೆ ಎಂದು ಹೇಳಲಾಗುತ್ತಿದೆ. ಏ.20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಏಪ್ರಿಲ್ 22 ರಂದು ನಾಮಪತ್ರ ವಾಪಸ್ ಗೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಏಪ್ರಿಲ್ 26, ಮೇ 7ರಂದು ಮತದಾನ
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.