ನವದೆಹಲಿ: ಇಂದು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸೋ ಸಂಬಂಧ ಚರ್ಚೆ ನಡೆಸಲಾಗಿದೆ. ಇನ್ನೂ ಅಂತಿಮಗೊಂಡಿಲ್ಲ. ನಾಳೆ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಬಿಜೆಪಿ ಹೈಕಮಾಂಡ್ ಫೈನಲ್ ಮಾಡಲಿದ್ದಾರೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವಂತ ಸಿಇಸಿ ಸಭೆ ಅಂತ್ಯಗೊಂಡ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡೋ ಬಗ್ಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಇಂದು ಸಿಇಸಿ ಸಭೆಯಲ್ಲಿ ಚರ್ಚೆಯಾಗಿದೆ. ನಾಳೆ ಮತ್ತೊಂದು ಸುತ್ತಿನ ಸಭೆಯಲ್ಲಿ ಪಟ್ಟಿ ಅಂತಿಮ ಆಗಲಿದೆ ಎಂದರು.
2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡೋ ನಿರೀಕ್ಷೆಯಿದೆ. ಮೈತ್ರಿ ಅಭ್ಯರ್ಥಿಗಳ ಬಗ್ಗೆಯೂ ಇಂದಿನ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂಬುದಾಗಿ ತಿಳಿಸಿದರು.
‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘2000 ವೇತನ’ ಹೆಚ್ಚಳ- ಸಿಎಂ ಭರವಸೆ