ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಕುಟುಂಬ ಮುಖ್ಯ ಬರಲ್ಲ. ಇಲ್ಲಿ ಏನೆ ಇದ್ದರೂ ಗೆಲ್ಲುವುದೊಂದೆ ಮುಖ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ವಿಶ್ವದ ಅತಿದೊಡ್ಡ ‘ಧಾನ್ಯ ಸಂಗ್ರಹ ಯೋಜನೆ’ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ ಪ್ರಧಾನಿ ಮೋದಿ
ಬೆಳಗಾವಿ ತಾಲೂಕಿನ ಕಣಕುಂಬಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಹೇಳಿದರು.
ನೀವೆನು ಸತ್ಯವಂತರ? ನಿಮ್ಮಪ್ಪನನ್ನು ‘ಜೈಲಿಗೆ’ ಹಾಕಿಸಿದ್ದು ನೀವೇ ಅಲ್ವಾ? ಬಿವೈವಿ ವಿರುದ್ಧ ವಿಶ್ವನಾಥ್ ವಾಗ್ದಾಳಿ
ಕಳೆದ ಬಾರಿ ಪ್ರಬಲ ಅಭ್ಯರ್ಥಿಗಳಿರಲಿಲ್ಲ. ಹಾಗಾಗಿ ನಾನೇ ಸ್ಪರ್ಧಿಸಬೇಕಾಯಿತು. ಆದರೆ, ಈ ಬಾರಿ ಪ್ರಬಲ ಅಭ್ಯರ್ಥಿಗಳಿದ್ದಾರೆ ಎಂದರು. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾಗದು. ಸಿಎಂ ಸಿದ್ದರಾಮಯ್ಯ ಅವರನ್ನು ಬೀಳಿಸುವವರು ಯಾರಿದ್ದಾರೆ ಎಂದು ಪ್ರಶ್ನಿಸಿದರು.ಮಾಜಿ ಸಂಸದ ರಮೇಶ ಕತ್ತಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ಯಾವುದೇ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅವರು ನಮ್ಮನ್ನು ಸಂಪರ್ಕಿಸಿಲ್ಲ. ಕತ್ತಿ ಅವರಿಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದರು.
ತುರ್ತು ನಿರ್ವಹಣಾ ಕಾರ್ಯ : ಫೆ.27-28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತ