ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರ ತೊರೆದು, ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಅವರು ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
2019ರಲ್ಲಿ ಉತ್ತರ ಪ್ರದೇಶದ ಆಮೇಠಿ ಹಾಗೂ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ 4 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ರಾಜಕೀಯದ ಕಾರಣದಿಂದ ರಾಹುಲ್ ಗಾಂಧಿ ಕ್ಷೇತ್ರ ಬಿಟ್ಟು ಮತ್ತೊಂದು ಸುರಕ್ಷಿತ ಕ್ಷೇತ್ರ ಹುಡುಕುತ್ತಿದ್ದು, ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳ ಪ್ರಕಾರ ಉತ್ತರ ಪ್ರದೇಶದ ಒಂದು ಕ್ಷೇತ್ರ ಹಾಗೂ ಕರ್ನಾಟಕ ಅಥವಾ ತೆಲಂಗಾಣದ ಮತ್ತೊಂದು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಆಮೇಠಿ ಜೊತೆಗೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಅಥವಾ ತೆಲಂಗಾಣದ ಮಲ್ಕಾಜಗಿರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಂಭವವಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
‘ರಾಜ್ಯ ಸರ್ಕಾರ’ದಿಂದ 4 ಬಾರಿ ಗ್ರಾಮ ಪಂಚಾಯ್ತಿ ‘ಸಾಮಾನ್ಯ ಸಭೆ’ಗೆ ಗೈರಾಗಿದ್ದ ‘ಸದಸ್ಯೆ ಅನರ್ಹ’ಗೊಳಿಸಿ ಆದೇಶ