ಮೈಸೂರು: ಇಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸಿದ್ಧರಾಮನಹುಂಡಿಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ಮತದಾನ ಮಾಡಿದರು.
ಇಂದು ಮೈಸೂರಿನ ಸಿದ್ಧರಾಮನಹುಂಡಿಗೆ ತೆರಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಯತೀಂದ್ರ ಸಿದ್ಧರಾಮಯ್ಯ ಅವರು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಪಾಲ್ಗೊಂಡರು.
ತಮ್ಮ ಸ್ವಗ್ರಾಮ ಸಿದ್ಧರಾಮನಹುಂಡಿಯ ಮತಗಟ್ಟೆಗೆ ತರಳಿದಂತ ಸಿಎಂ ಸಿದ್ಧರಾಮಯ್ಯ, ಪುತ್ರ ಯತೀಂದ್ರ ಸಿದ್ಧರಾಮಯ್ಯ ಅವರು ತಮ್ಮ ಮತವನ್ನು ಚಲಾಯಿಸಿದರು.
ಲೋಕಸಭಾ ಚುನಾವಣೆಗೆ ಮತದಾನ: ಹೀಗಿದೆ 1 ಗಂಟೆಯವರೆಗೆ ಬೆಂಗಳೂರು ಕ್ಷೇತ್ರವಾರು ಮತದಾನದ ಪ್ರಮಾಣ
ಬೆಂಗಳೂರು: ಇಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಬೆಂಗಳೂರಲ್ಲಿ ಕ್ಷೇತ್ರವಾರು ಪ್ರಮಾಣ ಎಷ್ಟು ಆಗಿದೆ ಅಂತ ಮುದಂ ಓದಿ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ ಮತದಾನದ ಶೇಖಡಾವಾರು ಪ್ರಮಾಣ: ಮಧ್ಯಾಹ್ನ 01.00 ಗಂಟೆಯವರೆಗಿನ ವರದಿ
ಬೆಂಗಳೂರು ಕೇಂದ್ರ: ಶೇ. 30.10
ಬೆಂಗಳೂರು ದಕ್ಷಿಣ: ಶೇ. 31.51
ಬೆಂಗಳೂರು ಉತ್ತರ: ಶೇ. 32.25
ಚುನಾವಣೆ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತ ಶಿಕ್ಷಕಿ ಸಾವು
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸಿದ್ದ ವೇಳೆ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಎಪಿಆರ್ಓ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಚುನಾವಣೆಯಿಂದ ಪ್ರಧಾನಿ ಮೋದಿಯನ್ನು 6 ವರ್ಷ ಅನರ್ಹತೆ ಕೋರಿ ಹೈಕೋರ್ಟ್‌ಗೆ ಅರ್ಜಿ!
BREAKING: ಭಾರತದಲ್ಲಿ ಮತ್ತೆ X (ಟ್ವಿಟರ್) ಸರ್ವರ್ ಡೌನ್, ಬಳಕೆದಾರರ ಪರದಾಟ