Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ’66 RTO ಕಚೇರಿ’ಗಳಲ್ಲಿ ‘mVahan’ ಮೊಬೈಲ್ ಆಪ್‌ ಜಾರಿ, ಭ್ರಷ್ಟಾಚಾರಕ್ಕೆ ಬ್ರೇಕ್!

08/03/2026 5:02 PM

ಅಮೆರಿಕಕ್ಕೆ ಗಲ್ಫ್ ರಾಷ್ಟ್ರಗಳ ಶಾಕ್: ಬೃಹತ್ ಹೂಡಿಕೆ ಹಾಗೂ ಒಪ್ಪಂದಗಳ ಹಿಂಪಡೆಯುವಿಕೆಗೆ ಚಿಂತನೆ

08/03/2026 4:30 PM

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿಂದು 2 ನೇ ಹಂತದ ‘ಲೋಕಸಮರ’ : 14 ಕ್ಷೇತ್ರಗಳಲ್ಲಿ 227 ಮಂದಿ ಭವಿಷ್ಯ ನಿರ್ಧಾರ
KARNATAKA

ರಾಜ್ಯದಲ್ಲಿಂದು 2 ನೇ ಹಂತದ ‘ಲೋಕಸಮರ’ : 14 ಕ್ಷೇತ್ರಗಳಲ್ಲಿ 227 ಮಂದಿ ಭವಿಷ್ಯ ನಿರ್ಧಾರ

By kannadanewsnow5707/05/2024 5:49 AM

ಬೆಂಗಳೂರು : ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳ 227 ಅಭ್ಯರ್ಥಿಗಳ ಭವಿಷ್ಯ ಇಂದು ತೀರ್ಮಾನವಾಗಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆ.

ಮತ ಕೇಂದ್ರಗಳಿಗೆ ಮತಯಂತ್ರ, ಮತದಾನದ ಸಾಮಗ್ರಿ ಕಳುಹಿಸಿಕೊಡಲಾಗಿದ್ದು, ಸಿಬ್ಬಂದಿಗಳು ತಮಗೆ ವಹಿಸಿರುವ ಮತಗಟ್ಟೆಗಳಿಗೆ ತೆರಳಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ನಡೆಯುವ ಮತದಾನದ ವೇಳೆ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿ ದ್ದಾರೆ. ಚುನಾವಣಾ ಅಖಾಡದಲ್ಲಿರುವ 227 ಅಭ್ಯ ರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದಾರೆ. ದಾವಣಗೆರೆಯಲ್ಲಿ ಗರಿಷ್ಠ 30 ಅಭ್ಯರ್ಥಿಗಳು ಮತ್ತು ರಾಯಚೂರಿನಲ್ಲಿ ಕನಿಷ್ಠ 8 ಅಭ್ಯರ್ಥಿಗಳಿದ್ದಾರೆ.

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.

200 ಮೀಟರ್ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ಸಹ ನಿಷೇಧಿಸಲಾಗಿದೆ.

ಮತದಾನ ದಿನದಂದು ರಾಜಕೀಯ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತದಾರರನ್ನು ವಾಹನದಲ್ಲಿ ಕೂರಿಸಿಕೊಂಡು ಮತಗಟ್ಟೆಗೆ ತರುವುದಾಗಲಿ ಅಥವಾ ಮತಗಟ್ಟೆಯಿಂದ ಮನೆಗೆ ಬಿಡುವಂತ ಯಾವುದೇ ಸೇವೆ ನೀಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು.

ಮೊಬೈಲ್ ಫೋನ್ ನಿಷೇಧ:

ಮತದಾನಕ್ಕಾಗಿ ಆಗಮಿಸುವ ಮತದಾರರಿಗೆ ಮತಗಟ್ಟೆ ಕೇಂದ್ರಗಳ ಒಳಗಡೆ ಮೊಬೈಲ್ ಫೋನ್‍ನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಲ್ಲದೇ ಮತಗಟ್ಟೆ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ.

ಪರ್ಯಾಯ ದಾಖಲೆ ತೋರಿಸಿ ಮತ ಚಲಾಯಿಸಿ:

ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹೊಂದಿಲ್ಲದಿದ್ದರೂ ಆಧಾರ್ ಕಾರ್ಡ್, ಎಮ್.ಎನ್.ಆರ್.ಇ.ಜಿ.ಎ. (ಒಓಖಇಉಂ) ಜಾಬ್ ಕಾರ್ಡ್, ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ ಹಾಗೂ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ (ಯುಡಿಐಡಿ) ಕಾರ್ಡ್ ತೋರಿಸಿ ಮತ ಚಲಾಯಿಸಬಹುದಾಗಿದೆ.

ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ:

ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಾಕಲಾಗುತ್ತದೆ.

ರಾಜ್ಯ ಸರ್ಕಾರಿ ಕಚೇರಿ, ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.7 ರ ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ3(ಎ) ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ135(ಬಿ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಇದಕ್ಕೆ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಅವರು ತಿಳಿಸಲಾಗಿದೆ.

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.

Lok Sabha elections : 227 candidates to decide fate in 14 constituencies ರಾಜ್ಯದಲ್ಲಿಂದು 2 ನೇ ಹಂತದ ‘ಲೋಕಸಮರ’ : 14 ಕ್ಷೇತ್ರಗಳಲ್ಲಿ 227 ಮಂದಿ ಭವಿಷ್ಯ ನಿರ್ಧಾರ
Share. Facebook Twitter LinkedIn WhatsApp Email

Related Posts

ರಾಜ್ಯದ ’66 RTO ಕಚೇರಿ’ಗಳಲ್ಲಿ ‘mVahan’ ಮೊಬೈಲ್ ಆಪ್‌ ಜಾರಿ, ಭ್ರಷ್ಟಾಚಾರಕ್ಕೆ ಬ್ರೇಕ್!

08/03/2026 5:02 PM1 Min Read

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM1 Min Read

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM2 Mins Read
Recent News

ರಾಜ್ಯದ ’66 RTO ಕಚೇರಿ’ಗಳಲ್ಲಿ ‘mVahan’ ಮೊಬೈಲ್ ಆಪ್‌ ಜಾರಿ, ಭ್ರಷ್ಟಾಚಾರಕ್ಕೆ ಬ್ರೇಕ್!

08/03/2026 5:02 PM

ಅಮೆರಿಕಕ್ಕೆ ಗಲ್ಫ್ ರಾಷ್ಟ್ರಗಳ ಶಾಕ್: ಬೃಹತ್ ಹೂಡಿಕೆ ಹಾಗೂ ಒಪ್ಪಂದಗಳ ಹಿಂಪಡೆಯುವಿಕೆಗೆ ಚಿಂತನೆ

08/03/2026 4:30 PM

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM
State News
KARNATAKA

ರಾಜ್ಯದ ’66 RTO ಕಚೇರಿ’ಗಳಲ್ಲಿ ‘mVahan’ ಮೊಬೈಲ್ ಆಪ್‌ ಜಾರಿ, ಭ್ರಷ್ಟಾಚಾರಕ್ಕೆ ಬ್ರೇಕ್!

By kannadanewsnow0908/03/2026 5:02 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯದ ಸಾರಿಗೆ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಸಾರಿಗೆ ಸಚಿವ ರಾಮಲಿಂಗಾ…

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM

ರಾಜ್ಯ ಬಜೆಟ್‌ನಲ್ಲಿ ಕ್ವಾಂಟಮ್‌ ರೋಡ್‌ಮ್ಯಾಪ್‌ ಗೆ 10 ಕೋಟಿ ರೂ ಘೋಷಣೆ: ಸಮಗ್ರ ಅಭಿವೃದ್ದಿಯ ಐತಿಹಾಸಿಕ ಹೆಜ್ಜೆ: ಸಚಿವ ಎನ್‌ ಎಸ್‌ ಭೋಸರಾಜು

08/03/2026 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.