ಬೆಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇದೇ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ.
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡAತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡAತೆ ಏಪ್ರಿಲ್ 26 ಮತ್ತು ಮೇ 7 ರಂದು ನಡೆಯುವ ಚುನಾವಣೆಗೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ಲೋಕಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.