ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯ ಐದು ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
BREAKING : ಮೈಸೂರಲ್ಲಿ ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ
ಬಿಬಿಎಂಪಿ 5 ಕ್ಷೇತ್ರಗಳಿಗೆ ಇದೀಗ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, 2 ಕ್ಷೇತ್ರಗಳನ್ನು ಹೊಂದಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, 3 ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.