ನವದೆಹಲಿ: ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೇ ಕರ್ನಾಟಕದ ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಯಾವುದೇ ಹೆಸರುಗಳನ್ನು ಘೋಷಣೆ ಮಾಡಲಾಗಿಲ್ಲ. ಬಿಜೆಪಿಯ 2ನೇ ಪಟ್ಟಿಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವನ್ನು ಬಿಜೆಪಿ ಒಳಗೊಂಡಿದೆ ಎಂದರು.
ವಾರಣಾಸಿಯಿಂದ ಪ್ರಧಾನಿ ಮೋದಿ, ಅಂಡಮಾನ್ ನಿಕೋಬರ್ ಬಿಷ್ಣು, ಅರುಣಾಚಲಪ್ರದೇಶ್ ಕಿರಣ್ ರಿಜು, ಅರುಣಾಚಲ ಈಸ್ಟ್ ಟಾಪಿರ್ ಗಾವ್, ಅಸ್ಸಾಂ ಕಳಿಂಗ ಉಪನಾಭ್ ಬಲ್ಲಾಳ್ ಸ್ಪರ್ಧೆ ಮಾಡಲಿದ್ದಾರೆ ಎಂದು ಅವರು ಹೇಳಿದರು.
ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ಛತ್ತೀರ್ ಘಡ್ 11, ದೆಹಲಿ 5, ಜಮ್ಮು-ಕಾಶ್ಮೀರ 2, ಅರುಣಾಚಲಪ್ರದೇಶ್ 2, ಗೋವಾ 1, ತ್ರಿಪುರ 1, ಅಂಡಮಾನ್ ನಿಕೋಬರ್ 1, ಡಮನ್ ಅಂಡ್ ಡಿಯು 1 ಸೇರಿದಂತೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
“ಇತ್ತೀಚಿನ ದಿನಗಳಲ್ಲಿ, ರಾಜ್ಯದಲ್ಲಿ ಅಭಿಪ್ರಾಯ ಸಮೀಕ್ಷೆಯ ನಂತರ ಹೆಸರುಗಳು ಕೇಂದ್ರಕ್ಕೆ ಬಂದಿವೆ. ಅದರ ಬಗ್ಗೆ ಚರ್ಚೆಯ ನಂತರ, ಕಳೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಪೈಕಿ 195 ಸ್ಥಾನಗಳನ್ನು ಅಂತಿಮಗೊಳಿಸಲಾಗಿದೆ” ಎಂದು ವಿನೋದ್ ತಾವಡೆ ಹೇಳಿದರು.
10 ವರ್ಷಗಳಿಂದ ಮೋದಿ ಸರ್ಕಾರವಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 195 ಕ್ಷೇತ್ರಗಳಿಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿದೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು.
ಯುವಕರು 47, ಅನುಸೂಚಿತ ಜಾತಿಯ 27, ಎಸ್ಟಿ ವರ್ಗದವರಿಗೆ 18, ಇತರೆ ವರ್ಗದ 57 ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲಾ ವರ್ಗಾದವರಿಗೂ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದರು.
195 ಅಭ್ಯರ್ಥಿಗಳಲ್ಲಿ 34 ಕೇಂದ್ರ ಸಚಿವರು ಸೇರಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.
ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ 51 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಮಧ್ಯಪ್ರದೇಶದ 29 ಸ್ಥಾನಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
195 ಅಭ್ಯರ್ಥಿಗಳಲ್ಲಿ 28 ಮಹಿಳೆಯರು ಕಣದಲ್ಲಿ
16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 28 ಮಹಿಳೆಯರು, 47 ಯುವ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅರುಣಾಚಲ ಪಶ್ಚಿಮ ಕ್ಷೇತ್ರದಿಂದ, ಸರ್ಬಾನಂದ ಸೋನೊವಾಲ್ ಅಸ್ಸಾಂನ ದಿಬ್ರುಗಢದಿಂದ ಸ್ಪರ್ಧಿಸಲಿದ್ದಾರೆ ಎಂದರು.
ದೆಹಲಿಯ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ಪ್ರವೀಣ್ ಖಂಡೇಲ್ವಾಲ್ (ಚಾಂದನಿ ಚೌಕ್)
ಮನೋಜ್ ತಿವಾರಿ ಈಶಾನ್ಯ ದೆಹಲಿ
ಬಾನ್ಸುರಿ ಸ್ವರಾಜ್ (ನವದೆಹಲಿ)
ಕಮಲ್ಕಿತ್ ಶೆರಾವತ್ (ಪಶ್ಚಿಮ ದೆಹಲಿ)
ರಾಮ್ವೀರ್ ಬಿಧುರಿ (ದಕ್ಷಿಣ ದೆಹಲಿ)
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರದೇಶದ ಗುನಾದಿಂದ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ವಿದಿಶಾದಿಂದ ಸ್ಪರ್ಧಿಸಲಿದ್ದಾರೆ.
ಗುಜರಾತ್ನಿಂದ 15 ಸ್ಥಾನ ಗೆದ್ದ ಬಿಜೆಪಿ ಅಮಿತ್ ಶಾ ಗಾಂಧಿನಗರದಿಂದ ಮತ್ತು ಮನ್ಸುಖ್ ಭಾಯ್ ಮಾಂಡವಿಯಾ ಪೋರ್ ಬಂದರ್ ನಿಂದ ಸ್ಪರ್ಧಿಸಲಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದ ಗುನಾದಿಂದ ಜ್ಯೋತಿರಾದಿತ್ಯ ಸಿಂಧಿಯಾ ಸ್ಪರ್ಧೆ ಮಾಡಲಿದ್ದಾರೆ.
ಕೇಂದ್ರ ಸಚಿವ ವಿ.ಮುರಳೀಧರನ್ ಅಟ್ಟಿಂಗಲ್ ನಿಂದ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿರುವನಂತಪುರಂನಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.
ಪ್ರಧಾನಿ ಮೋದಿ ವಾರಣಾಸಿಯಿಂದ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅರುಣಾಚಲ ಪಶ್ಚಿಮದಿಂದ, ಬಿಜೆಪಿ ಸಂಸದ ಬಿಷ್ಣು ಪದಾ ರೇ ಅಂಡಮಾನ್ ಮತ್ತು ನಿಕೋಬಾರ್ ನಿಂದ, ಬಿಜೆಪಿ ಸಂಸದ ತಪಿರ್ ಗಾವೊ ಅರುಣಾಚಲ ಪೂರ್ವದಿಂದ, ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ದಿಬ್ರುಗಢದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.
ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಸೇರಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮೇಘವಾಲ್ ಮತ್ತು ಭೂಪೇಂದ್ರ ಯಾದವ್ ಅವರನ್ನು ಕ್ರಮವಾಗಿ ಬಿಕಾನೇರ್ ಮತ್ತು ಅಲ್ವಾರ್ ನಿಂದ ಬಿಜೆಪಿ ಕಣಕ್ಕಿಳಿಸಿದೆ. ಸ್ಪೀಕರ್ ಓಂ ಬಿರ್ಲಾ ಕೋಟಾದಿಂದ ಸ್ಪರ್ಧಿಸಲಿದ್ದಾರೆ.
ನಟಿ-ರಾಜಕಾರಣಿ ಹೇಮಾ ಮಾಲಿನಿ ಮಥುರಾದಿಂದ ಮೂರನೇ ಬಾರಿಗೆ ಕಣಕ್ಕೆ ಇಳಿದಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಲೋಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಟಿಕೆಟ್ ನೀಡಲಾಗಿಲ್ಲ.
BMTCಯ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ