ಧಾರವಾಡ : ಸಾರ್ವತ್ರಿಕ ಲೋಕಸಭಾ ಚುನಾವಣೆ ದಿನಾಂಕ ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಮಾರ್ಚ್ 16 ರಿಂದ ಜಾರಿಯಲ್ಲಿದೆ. ಯಾವುದೇ ದಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದನ್ನು ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ನಿಷೇಧಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಾಲಯ ಮಂದಿರ, ಚರ್ಚ್, ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವುದನ್ನು ನಿμÉೀಧಿಸಲಾಗಿದೆ. ಮೇಲೆ ಹೇಳಲಾದ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.