ಬೆಂಗಳೂರು : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದ್ದು,ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
ಇದೇ ಏಪ್ರಿಲ್ 26 ರಂದು ರಾಜ್ಯದ ಮೊದಲ ಹಂತದಲ್ಲಿ 14ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರಬೀಳಲಿದ್ದು, ಅಭ್ಯರ್ಥಿಗಳು ಮಾತ್ರ ಮನೆಮನೆ ಪ್ರಚಾರ ಮಾಡಬಹುದಾಗಿದೆ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತಕ್ಕೆ ಮತದಾನ ನಡೆಯಲಿದೆ.







