ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ.

ಲೋಕಸಭಾ ಚುನಾವಣೆ-2024 ರ ಚುನಾವಣಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಪಟ್ಟಂತೆ ಚುನಾವಣಾ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಕಿರು ಹೊತ್ತಿಗೆಯ ಪ್ರತಿಯನ್ನು ವಿತರಿಸಿ ಸೂಕ್ತ ತಿಳುವಳಿಕೆಯನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಿದೆ. ಮಾರ್ಗದರ್ಶನದ ಕಿರು ಹೊತ್ತಿಗೆಯನ್ನು ಇದರೊಂದಿಗೆ ಲಗತ್ತಿಸಿದೆ.

ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ನಡೆಸಲು ದಿನಾಂಕ: 28-03-2024 ರಂದು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ದಿನಾಂಕ: 26-04-2024 ರಂದು ನಡೆಯಲಿರುವ ಚುನಾವಣೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಗೆ 05 ಲೋಕಸಭಾ ಕ್ಷೇತ್ರಗಳ 28 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಿರ್ವಹಿಸಬೇಕಾದ ಕರ್ತವ್ಯಗಳು, ಚುನಾವಣೆಯು ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಯುವಲ್ಲಿ ಪಕ್ಷಗಳು, ಅಭ್ಯರ್ಥಿಗಳು, ಅಧಿಕಾರಿಗಳು ಪಾಲಿಸಬೇಕಾದ ನೀತಿ ಸಂಹಿತೆಗಳು ಮತ್ತು ಚುನಾವಣಾ ಆಯೋಗವು ಈ ನಿಟ್ಟಿನಲ್ಲಿ ಹೊರಡಿಸಿರುವ ಸುತ್ತೋಲೆಗಳನ್ನು ಒಟ್ಟುಗೂಡಿಸಿ ಕಿರುಹೊತ್ತಿಗೆಯನ್ನು ದೈನಂದಿನ ಅನುಕೂಲಕ್ಕಾಗಿ ಪ್ರಕಟಿಸಲಾಗಿದೆ. ಇದರಲ್ಲಿರುವ ಎಲ್ಲಾ ಅಂಶಗಳನ್ನು ಓದಿ ಸರಿಯಾಗಿ ಅರ್ಥಮಾಡಿಕೊಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವುದು ತಮ್ಮ ಕರ್ತವ್ಯವಾಗಿರುತ್ತದೆ ಎಂದು ಆದೇಶಿಸಲಾಗಿದೆ.

Share.
Exit mobile version